ಹೊಸ ದೆಹಲಿ.29.ಏಪ್ರಿಲ್.25:- ಭಾರತ ವಿರುದ್ಧ ಪಾಕ್ ಬೆಂಬಲಕ್ಕೆ ನಿಂತ ಮುಸ್ಲಿಂ ರಾಷ್ಟ್ರಗಳು ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿಯು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಟರ್ಕಿ ಯುದ್ಧ ಉಪಕರಣಗಳನ್ನು ಕಳುಹಿಸುವ ಮೂಲಕ ಇಸ್ಲಾಮಾಬಾದ್‌ಗೆ ತನ್ನ ಬೆಂಬಲವನ್ನು ತೋರಿಸಿದೆ ಎಂಬ ಸುದ್ದಿ ಹರಡಿತ್ತು.
ಇದರ ನಡುವೆ ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು ಬಂದರೆ ಅವುಗಳನ್ನು ಪರಿಗಣಿಸಬಾರದು ಎಂದು ಟರ್ಕಿ ರಕ್ಷಣಾ ಸಚಿವಾಲಯ ತಿಳಿಸಿದೆ.
ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದೆ ಎಂದು ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಬಳಿಕ ಟರ್ಕಿ ಸರಕು ವಿಮಾನದ ಚಿತ್ರವನ್ನು ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದೆ.
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಅಂಕಾರಾ ಖಂಡಿಸಿತ್ತು. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು, ಅನೇಕರು ಗಾಯಗೊಂಡಿದ್ದರು.
ಬೆಂಗಳೂರು.07.ಆಗಸ್ಟ್.25:- ರಾಜ್ಯ ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ಯೋಜನೆ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮುದಾಯಕೆ ವಿವಿಧ ಯೋಜನೆಗಳಿಗೆ ಅರ್ಹರು ಅಭ್ಯರ್ಥಿಗಳಿಂದ…
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…