ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರ-ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.14.ಏಪ್ರಿಲ್.25:- ಮಹಾಮಾನವತಾವಾದಿ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.


ಅವರು ಸೋಮವಾರ ಸಂಜೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ನಮ್ಮ ದೇಶದಲ್ಲಿದ್ದ ಅಸಮಾನತೆ, ಅಸ್ಪೃಶ್ಯತೆ, ಮೌಢ್ಯತೆ, ಅಂಧಕಾರ ಮತ್ತು ಅರ್ಥವಿಲ್ಲದ ಆಚರಣೆಗಳನ್ನು ಕಣ್ಣಾರೆ ಕಂಡು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತುಂಬಾನೇ ಮನನೊಂದಿದರು.

ಅನೇಕ ಬಾರಿ ಅವರು ಕೂಡ ಅಸ್ಪೃಶ್ಯತೆ, ಅಸಮಾನತೆ, ಮೌಢ್ಯತೆಗಳಿಂದಾಗಿ ಅವಮಾನ, ಅಪಮಾನಗಳನ್ನು ಎದುರಿಸಿದರು. ಎಷ್ಟೇ ಅವಮಾನ, ಅಪಮಾನಗಳು ಎದುರಾದರೂ ಕೂಡ ತಮ್ಮ ಶಿಕ್ಷಣವನ್ನು ಮುಂದುವರಿಸಿ ಅಮೆರಿಕ ಮತ್ತು ಲಂಡನ್‌ಗಳಲ್ಲಿ ಶಿಕ್ಷಣ ಪೂರ್ಣಗೊಳಿಸಿದರು. ಮುಂದೆ ಭಾರತಕ್ಕೆ ಹಿಂತಿರುಗಿ ಅನೇಕ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಕೈಗೊಂಡರು. ಪತ್ರಿಕೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಮಹಿಳೆಯರು ಶಿಕ್ಷಣಕ್ಕೆ ಅರ್ಹರಲ್ಲ ಎನ್ನುವ ಮನುಸ್ಮೃತಿಯನ್ನು ನಡು ಬೀದಿಯಲ್ಲಿ ಸುಟ್ಟರು. ಲಂಡನ್ನಿನಲ್ಲಿ ನಡೆದ ದುಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿ ದೀನ ದಲಿತರ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನಮ್ಮ ದೇಶಕ್ಕೆ ನೀಡಿದ್ದಾರೆ ಎಂದು ಹೇಳಿದರು.


ಸಮಾಜದ ಎಲ್ಲ ವರ್ಗದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಏಳಿಗೆ ಕಾಣಬೇಕು ಮತ್ತು ಸಮಾನವಾಗಿ ಜೀವನ ನಡೆಸಬೇಕು ಎನ್ನುವುದು ಇವರ ಆಶಯವಾಗಿದೆ.

ಎಲ್ಲಾ ವರ್ಗದವರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿರುವುದು ನಮ್ಮ ಸಂವಿಧಾನ ನೀಡಿರುವ ಶಿಕ್ಷಣ, ಸ್ವಾತಂತ್ರ‍್ಯ, ಸಮಾನತೆಗಳಿಂದ ಸಾಧ್ಯವಾಗಿದೆ. ಮೊದಲು ರಾಜರ ಮಕ್ಕಳೇ ರಾಜರಾಗುತ್ತಿದ್ದರು. ಸಂವಿಧಾನ ಜಾರಿಗೆ ಬಂದ ಮೇಲೆ ಭಾರತದ ಯಾವುದೇ ಪ್ರಜೆ ಈ ದೇಶದಲ್ಲಿ ರಾಷ್ಟ್ರಪತಿ, ಪ್ರಧಾನಿಮಂತ್ರಿ, ಮುಖ್ಯಮಂತ್ರಿ ಏನು ಬೇಕಾದರೂ ಆಗಬಹುದು. ಸಂವಿಧಾನವನ್ನು ತಿಳಿದುಕೊಳ್ಳಬೇಕು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳು ನಾವೇಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.


ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗುವಂತಹ ಹಾಗೂ ಸಮಾಜದ ಎಲ್ಲಾ ವರ್ಗಗಳ ಏಳ್ಗೆಗೆ ಸಾಧ್ಯವಾಗುವಂತಹ ಸಂವಿಧಾನವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಮಗೆ ನೀಡಿದ್ದಾರೆ. ಸಮಾಜದಲ್ಲಿ ಸಮಾನತೆಯಿಂದ ಮತ್ತು ಸಹಬಾಳ್ವೆಯಿಂದ ಬದುಕಬೇಕು, ಐಕ್ಯತೆ ಬಹಳ ಮುಖ್ಯವಾಗಿದೆ. ಹಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಈ ದೇಶದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ತಿಳಿಸಿದರು.


ಬೀದರ ದಕ್ಷಿಣದ ಶಾಸಕರಾದ ಡಾ.ಶೈಲೇಂದ್ರ ಕೆ. ಬೆಲ್ದಾಳೆ ಅವರು ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಲ್ಲಾ ವರ್ಗಗಳ ಏಳ್ಗೆಗೆ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗುವ ಸಂವಿಧಾನವನ್ನು ನಮಗೆ ನೀಡಿದ್ದಾರೆ, ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಸಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಶಾಹೀನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಅಬ್ದುಲ್ ಖಲೀದ್ ಅವರನ್ನು ವಿಶೇಷ ಸನ್ಮಾನ ಮಾಡಲಾಯಿತು.


ಈ ಕಾರ್ಯಕ್ರಮದಲ್ಲಿ ಬೈಲೂರ ಮುಂಡರಗಿ ಹಾಗೂ ನಿಷ್ಕಲ ಮಂಟಪ, ತೋಂಟದಾರ್ಯ ಮಠದ ಸ್ವಾಮೀಜಿ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ಅಣದೂರ ವೈಶಾಲಿ ನಗರ ಬುದ್ಧ ವಿಹಾರ ಭಂತೆ ಜ್ಞಾನಸಾಗರ, ನಗರ ಸಭೆ ಅಧ್ಯಕ್ಷರಾದ ಮಹಮ್ಮದ ಗೌಸ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಗಿರೀಶ ಬದೋಲೆ, , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ರಘು ಹೆಚ್. ಎಸ್, ಮಾರುತಿ ಬೌದ್ಧೆ, ಅನೀಲ ಬೆಲ್ದಾರ, ಪಂಡಿತರಾವ ಚಿದ್ರಿ, ಅಭಿ ಕಳೆ, ವಿಜಯಕುಮಾರ ಸೊನಾರೆ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

6 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

6 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

7 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

8 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

9 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

10 hours ago