ಬೀದರ.28.ಫೆ.25:- ಇಂದು ಭಾಲ್ಕಿ ಪಟ್ಟಣದಲ್ಲಿ 50 ವರ್ಷಗಳಿಂದ ಅಲೆಮಾರಿ ಜೀವನ ನಡೆಸಸುತ್ತಿರುವ ಸುಮಾರು 100 ಕುಟುಂಬಗಳು ಶೀಘ್ರವೇ ಭಾಲ್ಕಿಯ ಕಲವಾಡಿ ಬಳಿ ನಿರ್ಮಾಣವಾಗುತ್ತಿರುವ G+2 ಮಾದರಿಯ 400 ಹೊಸ ಫ್ಲಾಟ್ ಮನೆಗಳಿಗೆ ಸ್ಥಳಾಂತರಗೊಳ್ಳಲಿವೆ. ಈ ಕುಟುಂಬಗಳಿಗೆ ಗೌರವಯುತ ಮತ್ತು ಸುಸ್ಥಿರ ವಸತಿ ಒದಗಿಸುವ ಉದ್ದೇಶದಿಂದ ಈ ಪ್ರಯತ್ನ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಇಂದು ತಮ್ಮ ಜಾಗದಲ್ಲಿ ವಾಸಿಸುತ್ತಿರುವ ಈ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದರು. ಅವರು ನಿಮಗಾಗಿ ಹೊಸ ಮನೆಗಳನ್ನು ಉಚಿತವಾಗಿ ನೀಡಲಾಗುವದು, ನೀವು ಶೀಘ್ರವೇ ನಿಮ್ಮ ನೂತನ ಗೃಹಕ್ಕೆ ತೆರಳಲು ಸಿದ್ಧರಾಗಿರಿ ಎಂದು ತಿಳಿಸಿದರು.
ಇದು ಇಡೀ ರಾಜ್ಯಕ್ಕೆ ಮಾದರಿಯಂತಹ ಸಮಾಜಮುಖಿ ತೀರ್ಮಾನ. ಈ ಕುಟುಂಬಗಳು ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದರೂ, ಈಶ್ವರ ಖಂಡ್ರೆ ಅವರು ತಮ್ಮ ಸ್ವಂತ ಜಾಗದಲ್ಲಿ ಅವರಿಗೆ ಆಶ್ರಯ ನೀಡಿ, ಇದೀಗ ಸರ್ಕಾರದ ಸಹಯೋಗದಿಂದ ಹೊಸ ಮನೆಗಳಲ್ಲಿ ಸ್ಥಳಾಂತರಿಸಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.
ಈ ತೀರ್ಮಾನದಿಂದ ಅಲೆಮಾರಿ ಕುಟುಂಬಗಳಿಗೆ ಭದ್ರತೆಯ ಜೀವನ ದೊರಕಲಿದ್ದು, ಅವರ ಭವಿಷ್ಯ ಉಜ್ವಲವಾಗಲಿದೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…