ಭಾಲ್ಕಿ.14.ಫೆ.25:- ಭಾಲ್ಕಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ರಸ್ತೆಗಳು ನಮ್ಮ ಅಭಿವೃದ್ಧಿಯನ್ನು ಬಿಂಬಿಸುತ್ತವೆ.
ಭಾಲ್ಕಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸದ ಜತೆಗೆ ರಸ್ತೆಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ತಾಲ್ಲೂಕಿನ ಮೇಥಿ ಮೇಳಕುಂದಾ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹4.40 ಕೋಟಿ ವೆಚ್ಚದಲ್ಲಿ ಭಾತಂಬ್ರಾದಿಂದ ಕಾಸರತೂಗಾಂವ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಹಿಂದೆಂದು ಕಾಣದ ರೀತಿಯಲ್ಲಿ ಉತ್ತಮವಾಗಿ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಖ್ಯ ರಸ್ತೆಗಳ ಜತೆಗೆ ಗ್ರಾಮೀಣ ಭಾಗದ ವಿವಿಧೆಡೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.
ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ಮರಾಠಾ ಸಮಾಜದ ಮುಖಂಡ ಜನಾರ್ದನ ಬಿರಾದಾರ, ಮೇಥಿ ಮೇಳಕುಂದಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉತ್ತಮಬಾಯಿ ಬಿ, ಭಾತಂಬ್ರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಪಾಟೀಲ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕಾಶಿನಾಥ ಲದ್ದೆ, ಪ್ರಥಮ ದರ್ಜೆ ಗುತ್ತಿಗೆದಾರ ರಿಯಾಜಪಾಶಾ, ಮುಸ್ತಾಕ್ ಅಹ್ಮದ್, ದೀಪಕ ಠಮಕೆ ಹಾಜರಿದ್ದರು.
ತಾಲೂಕಿನ ಎಲ್ಲಾ ರಸ್ತೆಗಳು ಉತ್ತಮವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…