ಬೀದರ.28.ಫೆ.25:- ಇಂದು ತಾಲೂಕಾ ಪಂಚಾಯತನಲ್ಲಿ ಭಾಲ್ಕಿ ತಾಲೂಕಿನಾದ್ಯಂತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇಂದು (ಫೆ.27) ಭಾಲ್ಕಿಯ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡುತ್ತಾ, ಜೂನ್ ಅಂತ್ಯದವರೆಗೆ ಯಾವುದೇ ಗ್ರಾಮ, ಬಡಾವಣೆ, ಜನವಸತಿ ಪ್ರದೇಶಗಳಲ್ಲಿ ನೀರಿನ ಕೊರತೆಯಾಗದಂತೆ ಸರ್ಕಾರದಿಂದಲೇ ಅಗತ್ಯ ಅನುದಾನವನ್ನು ಒದಗಿಸಲಾಗಿದ್ದು, ಇದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಂದಾಯ, ಪಂಚಾಯತ್ ರಾಜ್, ಜೆಸ್ಕಾ ಮತ್ತು ಪುರಸಭೆಯ ಅಧಿಕಾರಿಗಳು ಜಂಟಿಯಾಗಿ ಹಳ್ಳಿ-ಹಳ್ಳಿಗಳನ್ನು ಪರಿಶೀಲಿಸಿ, ಬೇಸಿಗೆ ಮುಗಿಯುವವರೆಗೆ ಯಾವುದೇ ಸಮಸ್ಯೆ ಉಂಟಾಗದಂತೆ ನಿರ್ವಹಿಸಬೇಕು ಎಂದು ಹೇಳಿದರು.
ಕಾರಂಜಾ ಬ್ಯಾರೇಜ್ ನೀರು ಬಿಡುಗಡೆ ಸಂಬಂಧ ತೀವ್ರ ಆಕ್ರೋಶ ಕಾರಂಜಾ ಬ್ಯಾರೇಜ್‌ನಿಂದ ಅನುಮತಿಯಿಲ್ಲದೆ ನೀರು ಬಿಡುವ ಕುರಿತು ಕಿಡಿಕಾರಿದ ಸಚಿವರು, ಈ ನಿರ್ಧಾರವನ್ನು ಯಾವ ಅಧಿಕಾರಿಗಳು ಕೈಗೊಂಡರು? ಯಾರ ಒತ್ತಡಕ್ಕೆ ಮಣಿದು ನೀರು ಬಿಡುಗಡೆ ಮಾಡಲಾಗಿದೆ? ಎಂಬುದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಡಯಾಲಿಸಿಸ್ ಸಿಬ್ಬಂದಿಗೆ ತಕ್ಷಣವೇ ವೇತನ ಬಿಡುಗಡೆ.
ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಘಟಕದ ಸಿಬ್ಬಂದಿಗೆ ವೇತನ ಪಾವತಿಯಾಗದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತಕ್ಷಣವೇ ವೇತನ ಬಿಡುಗಡೆ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಸಿಬ್ಬಂದಿ ವೇತನ ಪಾವತಿಯಾಗದಿದ್ದರೆ ಅವರು ಹೇಗೆ ಕಾರ್ಯನಿರ್ವಹಿಸುತ್ತಾರೆ? ಎಂದು ಪ್ರಶ್ನಿಸಿದ ಸಚಿವರು, ಮುಂದಿನ ದಿನಗಳಲ್ಲಿ ಈ ರೀತಿಯ ವಿಳಂಬ ನಡೆಯಬಾರದು ಎಂದು ಎಚ್ಚರಿಸಿದರು.
ತೊಗರಿ ಖರೀದಿ ಪ್ರಕ್ರಿಯೆ ಸಕ್ರಮವಾಗಿ ನಡೆಯಬೇಕು.
ತಾಲೂಕಿನಲ್ಲಿ ತೊಗರಿ ಖರೀದಿ ಕೇಂದ್ರ ಪ್ರಾರಂಭವಾಗಿದ್ದು, ಹೆಸರು ನೋಂದಾಯಿಸಿದ ಎಲ್ಲಾ ರೈತರ ತೊಗರಿ ಖರೀದಿ ಮಾಡಬೇಕು ಎಂದು ಸಚಿವರು ತಿಳಿಸಿದರು. ತೊಗರಿ ಬೆಳೆ ಬೆಳೆದ ರೈತರಿಗೆ ಸರ್ಕಾರದ ನಿಗದಿ ಬೆಂಬಲ ಬೆಲೆ ಪೂರ್ತಿಯಾಗಿ ಲಭ್ಯವಾಗಬೇಕು ಎಂದು ಅವರು ಹೇಳಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ – ಶಿಕ್ಷಣ ಇಲಾಖೆಗೆ ಗುರಿ:
ಈ ಬಾರಿ ತಾಲೂಕಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಗೊಳಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಗುರಿ ನೀಡಲಾಯಿತು. ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವುದರಿಂದ ಬೋಧನಾ ತರಗತಿಗಳು ಹಾಗೂ ವಿಶಿಷ್ಟ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಫಲಿತಾಂಶ ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…