ಬೀದರ (ಕರ್ನಾಟಕ ವಾರ್ತೆ) ಜೂನ್.1:- ಹುಮನಾಬಾದ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಐಟಿಐ, ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ. ವಿದ್ಯಾರ್ಥಿಗಳು ಅನ್ಲೈನ್ ವೆಬ್ಸೈಟ್: https://shp.karnataka.gov.in/bcwd
ನಲ್ಲಿ ದಿನಾಂಕ: 20-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ h https//bcwd.karnataka.gov.in/ ನೋಡುಬಹುದು.
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 080-8050370005 ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಹುಮನಾಬಾದಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004, 8050770005, 08483200233, 8660636252 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.