ಭಾಲ್ಕಿ: ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ (ಕರ್ನಾಟಕ ವಾರ್ತೆ) ಜೂನ್.1:- ಹುಮನಾಬಾದ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಐಟಿಐ, ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾಲ್ಕಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1.00 ಲಕ್ಷ ರೂ. ಇದ್ದಿರುತ್ತದೆ. ವಿದ್ಯಾರ್ಥಿಗಳು ಅನ್‌ಲೈನ್ ವೆಬ್‌ಸೈಟ್: https://shp.karnataka.gov.in/bcwd  

ನಲ್ಲಿ ದಿನಾಂಕ: 20-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ h https//bcwd.karnataka.gov.in/   ನೋಡುಬಹುದು.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 080-8050370005 ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwdhelpline@gmail.com  ಗೆ ಇ-ಮೇಲ್ ಮುಖಾಂತರ ಅಥವಾ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಹುಮನಾಬಾದಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004, 8050770005, 08483200233, 8660636252 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago