ರಾಯಚೂರು.03.ಆಗಸ್ಟ್.25: ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸಹಾಯಕ ಸರಕಾರಿ ಅಭಿಯೋಜಕರಾದ ಹನುಮೇಶ ರಾಗಲಪರ್ವಿ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಅತ್ಯಂತ ಪ್ರಾಮುಖ್ಯತೆ ಹೊಂದಿದೆ. ಸರಿಯಾದ ರೀತಿಯಲ್ಲಿ ಶಿಕ್ಷಣ ಪಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ. ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಜಗತ್ತಿನಲ್ಲಿ ನಿಜವಾದ ಸಂಪತ್ತು ಗಳಿಸಬೇಕಾದರೆ ಉತ್ತಮ ಶಿಕ್ಷಣ ಪಡೆಯುವುದು ಅತ್ಯವಶ್ಯಕವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರು ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡಿ, 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬAಧ ಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016 ರಡಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
ದುಡಿಯುವ ಮಕ್ಕಳು ಎಲ್ಲಿಯಾದರೂ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098/112 ಗೆ ಉಚಿತವಾಗಿ ಕರೆ ಮಾಡಿ ಮಾಹಿತಿ ನೀಡುವುದರ ಮೂಲಕ ಸಮಾಜದಲ್ಲಿರುವ ಬಾಲಕಾರ್ಮಿಕ ಪದ್ಧತಿ ಎಂಬ ಪಿಡುಗನ್ನು ಹೋಗಲಾಡಿಸಲು ಎಲ್ಲರು ಸಹಕಾರ ನೀಡಬೇಕೆಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ)ಕಾಯ್ದೆಯ ಕುರಿತು ವೀರಭದ್ರಗೌಡ ಸಾಲಗುಂದ ವಕೀಲರು ಉಪನ್ಯಾಸ ನೀಡಿದರು. ಕಾರ್ಮಿಕ ನಿರೀಕ್ಷಕರಾದ ವಿಜಯಲಕ್ಷ್ಮೀ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಭುರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ದುರ್ಗಪ್ಪ, ತುರುವಿಹಾಳ ಪೊಲೀಸ್ ಠಾಣೆಯ ಎ.ಎಸ್.ಐ ಬಸಯ್ಯ, ವಕೀಲರಾದ ವೀರಭದ್ರಗೌಡ ಸಾಲಗುಂದ, ಚಂದ್ರು, ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಸಂಘದ ಅನ್ವರ ಪಾಶ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಜೋಕಿಮ್, ಅಕೌಂಟೆAಟ್ ಹುಸೇನ್ ನಾಯ್ಕ, ಮಾರ್ಗದರ್ಶಿ ಸಂಸ್ಥೆಯ ಹನುಮಂತ ಹಾಗೂ ಸ್ಥಳೀಯ ನಿವಾಸಿಗಳು ಮತ್ತು ಇನ್ನೀತರರು ಉಪಸ್ಥಿತರಿದ್ದರು.