ಬೀದರ.30.ಜನವರಿ.25:- ಬೀದರ್ ತಾಲೂಕಿನ ಜನವಾಡ.(ಯಾಕತಪುರ):- ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಮಾತೃ ಭಾಷೆ ಶಿಕ್ಷಣ ಬಹಳ ಪರಿಣಾಮಕಾರಿ ಆಗಿರುತ್ತದೆ. ಹೀಗಾಗಿ ಪಾಲಕರು ಮಕ್ಕಳಿಗೆ ಅನಿವಾರ್ಯವಾಗಿ ಅನಿವಾರ್ಯವಾಗಕನ್ನಡದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಸಾಹಿತಿ ಸುಬ್ಬಣ್ಣ ಕರಕನಳ್ಳಿ ಹೇಳಿದರು.
ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೀದರ್ ತಾಲ್ಲೂಕಿನ ಯಾಕತಪುರ ಗ್ರಾಮದ ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ಭಾಷೆ ಜಾಗೃತಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಾನಿಶ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗೌಸುದ್ದಿನ್ ಅಬ್ದುಲ್ ಸಾಬ್ ಮಾತನಾಡಿ, ಮಾತೃ ಭಾಷೆ ಶಿಕ್ಷಣ ಮಕ್ಕಳಿಗೆ ಸರಳವಾಗಿ ಅರ್ಥವಾಗುತ್ತದೆ. ಮಹತ್ವದ ಸಾಧನೆ ಮಾಡಲು ನೆರವಾಗುತ್ತದೆ ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ ಮಾತನಾಡಿ, ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೇಳಿದರು.
ಅಶ್ವಿನಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕುಪೇಂದ್ರ ಮಾತನಾಡಿ, ಕನ್ನಡ ಶಾಸನಗಳು, ಸಾಹಿತ್ಯ ಹಾಗೂ ಸಂಸ್ಕೃತಿ ಶ್ರೀಮಂತವಾಗಿದೆ ಎಂದು ಹೇಳಿದರು.
ಪಿಕೆಪಿಎಸ್ ಅಧ್ಯಕ್ಷ ಸೈಯದ್ ಅಹ್ಮಮದ್ ಮುದ್ದೆ, ಗ್ರಾಮ ಪಂಚಾಯಿತಿ ಸದಸ್ಯರಾದ ರತ್ನಮ್ಮ, ಸಂಜೀವಕುಮಾರ ದಳಪತಿ, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಅಬ್ದುಲ್ ನಬಿ, ಉರ್ದು ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಾವಿದ್ ಅಹಮ್ಮದ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ವಿನಾಯಕ ಇದ್ದರು.
ರಾಜ್ಯದಲ್ಲಿ ಮಾತ್ರಭಾಷಾ ಶಿಕ್ಷಣ ಮುಖ್ಯೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…