13 ಡಿಸೆಂಬರ್24ಬೀದರ್:- ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ 06-ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಮಕ್ಕಳಿಗೆ ಅಲ್ಬೆಂಡೋಜಲ್ ಮಾತ್ರೆಯನ್ನು ಪ್ರತಿ ಶಾಲಾ ಕಾಲೇಜುಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದ್ದು, ಉಳಿದ ಮಕ್ಕಳಿಗೆ ದಿನಾಂಕ:16-12-2024 ರಂದು ಮಾಪ್ ಅಪ್ ಕಾರ್ಯಕ್ರಮದ ಮೂಲಕ ನೀಡಲಾಗುತ್ತದೆ.
ಈ ಮಾತ್ರೆಯನ್ನು ಪ್ರತಿಯೊಬ್ಬ ಮಕ್ಕಳು ಚೀಪಿಸಿ ದೇಹದಲ್ಲಿರುವ ಪೋಷಕಾಂಶ ಹಾನಿಕಾರಕ ಜಂತುಹುಳುವನ್ನು ನಾಶ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅದಿಕಾರಿ ಡಾ.ಧ್ಯಾನೇಶ್ವರ ನೀರಗುಡೆ ಕರೆ ನೀಡಿದರು.
ಅವರು ಇತ್ತೀಚಿಎಗೆ ಸಿದ್ಧಾರೂಢ ಗುರುಕುಲ ಶಾಲೆ ಗುಂಪಾ ಬೀದರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನೌಬಾದ ಅವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಜಂತುಹುಳ ನಿವಾರಣಾ ದಿನ ಹಾಗೂ ಡಿ.16 ರಂದು ಮಾಪ್‌ಅಪ್ ದಿನ ನಿಮಿತ್ಯ ನಡೆಯುವ ಅಲ್ಬೆಂಡೋಜಲ್ ಮಾತ್ರೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾಡಿ ಮಕ್ಕಳಿಗೆ ಅಲ್ಬೆಂಡೋಜಲ್ ಮಾತ್ರೆ ನುಂಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಅಲ್ಬೆಂಡೋಜಲ್ ಮಾತ್ರೆಯು ವರ್ಷದಲ್ಲಿ ಎರಡು ಬಾರಿ ಸೇವಿಸುವುದರಿಂದ ದೇಹದಲ್ಲಿರುವ ಜಂತುಹುಳುವನ್ನು ನಿಯಂತ್ರಿಸಿ ಮಕ್ಕಳ ಅಪೌಷ್ಠಿಕತೆಯನ್ನು ನಿಯಂತ್ರಿಸಬಹುದಾಗಿದೆ. ಅಲ್ಲದೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ವೃದ್ಧಿಯಾಗಿ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ಧಿಯಾಗುತ್ತದೆ, ಕಾರಣ ಎಲ್ಲರೂ ಈ ಮಾತ್ರೆಯನ್ನು ಸೇವಿಸಬೇಕೆಂದರು.
ಡಾ|| ಶಿವಶಂಕರ.ಬಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಾಸ್ತಾವಿಕವಾಗಿ ಮಾತನಾಡಿ, ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ವಿವರಿಸಿದರು. ಹಾಗೂ ಜಂತುಹುಳು, ಅನಿಮಿಯಾ ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಬೀದರ ಸಿದ್ಧಾರೂಢ ಗುರುಕುಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಬಸವರಾಜ ಮ್ಯಾಗೇರಿ, ಬೀದರ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಗರೆ, ಬೀದರ ತಾಲ್ಲೂಕಾ ಆರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಬೀದರ ಐಟಿಐ ಕಾಲೇಜಿನ ಪ್ರಾಚಾರ್ಯರ ಲಕ್ಷಿö್ಮÃಕಾಂತ, ಉಮೇಶ ಬಿರಾದರ ಸೇರಿದಂತೆ ಇತರರು ಹಾಗೂ ಸಿಬ್ಬಂದಿಯವರು, ಶಾಲೆಯ ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು. ಓಂಕಾರ ಮಲ್ಲಿಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಬೀದರ ಕಾರ್ಯಕ್ರಮ ನಿರೂಪಣೆ ಹಾಗೂ ವಂದನಾರ್ಪಣೆ ಕಾರ್ಯಕ್ರಮ ನೆರವೇರಿಸಿದರು.
Source: www.prajaprabhat.com
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…