ಬೀದರ.19.ಫೆಬ್ರವರಿ.26:- 2024ನೇ ಸಾಲಿನ ಹಾಗೂ 2025ನೇ ಸಲಿನ ಅವಧಿಯಲ್ಲಿ ಅಂದರೆ ಜನೆವರಿ ಯಿಂದ ಡಿಸೆಂಬರ್ ತತಿಮಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಭರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024 ನೇ ಸಾಲಿನ (ಅಂದರೆ ಜನೆವರಿ-2024 ರಿಂದ ಡಿಸೆಂಬರ್-2024) ಹಾಗೂ 2025ನೇ (ಅಂದರೇ ಜನೆವರಿ-2025 ರಿಂದ ಡಿಸೆಂಬರ್-2025) ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಯನ್ನು ಪ್ರಧಾನ ಮಾಡಲು ಉದ್ದೇಶಿಸಲಾಗಿದೆ.
ಆದ್ದರಿಂದ ಈ ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುದರ ಬಗ್ಗೆ ಸ್ಪಷ್ಟವಾಗಿ ಅರ್ಜಿಯಲ್ಲಿ ನಮೂದಿಸಲು ತಿಳಿಸಿದೆ. ಹಾಗೂ ಪ್ರಶಸ್ತಿಗಾಗಿ ಪರಿಗಣಿಸಲು/ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 04 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ದಿನಾಂಕ:20-02-2026 ರೊಳಗಾಗಿ ಅಕಾಡೆಮಿ ಕೇಂದ್ರ ಕಚೇರಿ (ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂರವಾಣಿ ಸಂ:0836-2461666) ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8050392209, 7204396275, 9448981944 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.





Any questions related to ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ?