Home » ಲೈವ್ ನ್ಯೂಸ್ » ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂರಕ್ಷಣೆ: ಸೆಪ್ಟೆಂಬರ್ 6 ರಂದು ತರಬೇತಿ ಕಾರ್ಯಕ್ರಮ

ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂರಕ್ಷಣೆ: ಸೆಪ್ಟೆಂಬರ್ 6 ರಂದು ತರಬೇತಿ ಕಾರ್ಯಕ್ರಮ

Facebook
X
WhatsApp
Telegram

ಕೊಪ್ಪಳ.05.ಸೆಪ್ಟೆಂಬರ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರ ಸಹಯೋಗದಲ್ಲಿ “ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂರಕ್ಷಣೆ”ಯ ಕುರಿತು ವಸತಿ ನಿಲಯಗಳ ಅಧೀಕ್ಷಕರು, ನಿಲಯ ಪಾಲಕರು, ಪ್ಯಾರಾ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಆಧೀಕ್ಷಕರು, ಮುಖ್ಯಸ್ಥರಿಗೆ ತರಬೇತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 6 ರಂದು ಬೆಳಗ್ಗೆ 9.30 ರಿಂದ ಸಾಯಂಕಾಲ 5.30 ರವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಘನ ಉಪಸ್ಥಿತರಿರುವರು. ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟೆಪ್ಪನವರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಅತಿಥಿಗಳಾದ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇಶಕ ಸೋಮಶೇಖರಗೌಡ ಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪ್ರಕಾಶ ಕಡಗದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ ಅವರು ಪಾಲ್ಗೊಳ್ಳುವರು.

ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ವಿಭಾಗೀಯ ಸಂಯೋಜಕ ಡಾ. ಕೆ.ರಾಘವೇಂದ್ರ ಭಟ್ ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ವ್ಯವಸ್ಥಾಪಕ ಹರೀಶ ಜೋಗಿ ಅವರು ಭಾಗವಹಿಸಲಿದ್ದು, ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology