ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳು: ವಿದ್ಯಾರ್ಥಿಗಳಿಗೆ ಜಾಗೃತಿ

ಕೊಪ್ಪಳ.16.ಜುಲೈ25: ಯಲಬುರ್ಗಾದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು ವಿಶೇಷವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ತಿದ್ದುಪಡಿ-2016, ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಸುರಕ್ಷಿತ ಸ್ಪರ್ಶ-ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‌ರೀಚ್ ವರ್ಕರ್ ಪ್ರತಿಭಾ ಕಾಶಿಮಠ ಅವರು ಸಂಪೂರ್ಣ ಮಾಹಿತಿ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯವೈಖರಿ, ಮಕ್ಕಳ ಸಹಾಯವಾಣಿ-1098 ಮತ್ತು ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕ ರವಿ ಬಡಿಗೇರ್ ಅವರು ಮಕ್ಕಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಮಯ್ಯ ಅವರು ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ತಿದ್ದುಪಡಿ-2016 ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಸದಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.  ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಕಾಲೇಜಿನ ಅಧ್ಯಾಪಕಿ ಲಕ್ಷಿö್ಮÃ ಅವರು ನಿರ್ವಹಿಸಿದರು.

prajaprabhat

Recent Posts

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

9 minutes ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

5 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

6 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

6 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

6 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

8 hours ago