ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ಚೌಹಾಣ್ ಎಂಬಾತ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಬೆನ್ನಲ್ಲೇ ಇದೀಗ ವಿರುದ್ಧ ದೂರು ದಾಖಲಾಗಿದೆ.ಔರಾದ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಪ್ರಭು ಚೌಹಾಣ್ ವಿರುದ್ಧ ಕೂಡ ಇಂತಹದ್ದೇ ಆರೋಪ ಕೇಳಿ ಬಂದಿದ್ದು, ಶಾಸಕನ ಪುತ್ರನ ವಿರುದ್ಧ ದೂರು ದಾಖಲಾಗಿದೆ.
2023ರ ಡಿಸೆಂಬರ್ 25ರಂದು ಎರಡು ಮನೆಯವರು ಒಪ್ಪಿಗೆ ಸೂಚಿಸಿದ ಬಳಿಕ ಪ್ರತೀಕ್ ಜೊತೆ ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಇನ್ನಷ್ಟು ಹೊಂದಾಣಿಕೆಗಾಗಿ ಸ್ವಲ್ಪ ದಿನ ಒಟ್ಟಿಗೆ ಇರಿ ಎಂದು ನಮ್ಮಿಬ್ಬರನ್ನು ಕಳುಹಿಸಿ ಕೊಟ್ಟಿದ್ದರು.
ಅದರಂತೆ ಪ್ರತೀಕ್ ನನ್ನನ್ನು ಮಹಾರಾಷ್ಟ್ರದ ಲಾತೂರ್ ಗೆ ಕರೆದುಕೊಂಡು ಹೋಗಿದ್ದ..ಆ ವೇಳೆ ಪ್ರತೀಕ್ ನಾವಿಬ್ಬರೂ ಮದುವೆಯಾಗುತ್ತಿದ್ದೇವೆ ಎಂದು ಹೇಳಿ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ವಾಪಸ್ ಮನೆಗೆ ಹೋಗಿ ಮದುವೆ ಬಗ್ಗೆ ಮಾತಾಡಿದರೆ ಕೆಲ ತಿಂಗಳು ಹೋಗಲಿ ಎಂದು ಮುಂದೂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.
ಅಲ್ಲದೆ ಪ್ರಭು ಚೌಹಾಣ್ ಅವರ ಮನೆಗೆ ಹೋಗಿ ನನ್ನ ಪೋಷಕರು ಮದುವೆ ಬಗ್ಗೆ ಕೇಳಿದ್ದಕ್ಕೆ ಗಲಾಟೆ ಮಾಡಿ, ನಮ್ಮ ಮನೆಯವರನ್ನ ಬಡವರು ಎಂದು ಹೀಯಾಳಿಸಿ ಅವಮಾನ ಮಾಡಿ ಕಳಿಸಿದ್ದರು. ಇದೇ ವಿಚಾರಕ್ಕೆ ಎರಡು ಕುಟುಂಬದ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿದ್ದರು.
ಈ ವೇಳೆ ಪ್ರತೀಕ್ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದ್ರೆ, ಶಾಸಕರು ಎಂದು ಪೊಲೀಸರು ದೂರನ್ನ ಸ್ವೀಕಾರ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾಳೆ.
ಇದೀಗ ಅದೇ ವಿಚಾರಕ್ಕೆ ಮದುವೆ ಮಾಡಿಕೊಳ್ಳದೆ ಮೋಸ ಮಾಡಿ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…