ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು : ಸಿಎಂ ಸಿದ್ದರಾಮಯ್ಯ

ಮೈಸೂರು : ದೇಶದಲ್ಲಿ ಮನುಷ್ಯ ವಿರೋಧಿ ಮನುಸ್ಮೃತಿ ಮನುಸ್ಮೃತಿ ಸುಟ್ಟು ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ.ಬಿ.ಆರ್.ಅಂಬೇಡ್ಕರ್ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಬಸವಣ್ಣ ಮತ್ತು ಅಂಬೇಡ್ಕರ್ ಅವರ ವಿಚಾರ ಮತ್ತು ಮೌಲ್ಯಗಳು ಒಂದೇ ಆಗಿವೆ. ವಿಚಾರಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿದ್ದರೂ ಮೌಲ್ಯಗಳು ಮತ್ತು ಆಶಯಗಳೆಲ್ಲಾ ಒಂದೇ ಆಗಿವೆ ಎಂದರು.

ಅಂಬೇಡ್ಕರ್ ಅವರು ಓದಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ರಾಜ್ಯದಲ್ಲಿ ನಾವು ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಆರಂಭಿಸಿದ್ದೇವೆ. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ದರು. ನಾವು ಎಳೆದ ಸಾಮಾಜಿಕ ನ್ಯಾಯದ ರಥವನ್ನು ಮತ್ತಷ್ಟು ಮುಂದಕ್ಕೆ ಎಳೆದುಕೊಂಡು ಹೋಗಿ, ಸಾಧ್ಯವಾಗದಿದ್ದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ. ಅಲ್ಲೇ ಬಿಟ್ಟುಬಿಡಿ ಆದರೆ ಹಿಂದಕ್ಕೆ ತಳ್ಳಬೇಡಿ ಎಂದಿದ್ದರು. ಹೀಗಾಗಿ ಮೌಡ್ಯ, ಕಂದಾಚಾರಗಳಲ್ಲಿ ಮುಳುಗಿ ಅಂಬೇಡ್ಕರ್ , ಬಸವಣ್ಣ ವಿಚಾರಗಳಿಗೆ ದ್ರೋಹ ಎಸಗಬಾರದು ಎಂದರು.

ವ್ಯಾಸ ಮಹಾಭಾರತ ಬರೆದರು. ವಾಲ್ಮೀಕಿ ರಾಮಾಯಣ ಬರೆದರು. ಅವಕಾಶಗಳು ಮುಖ್ಯ. ಜ್ಞಾನ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಕ್ಕಾಗ ಜ್ಞಾನ ಹೊರಗೆ ಬರುತ್ತದೆ. ಆದ್ದರಿಂದ ನಮ್ಮ ಅವಕಾಶಗಳನ್ನು ಕಿತ್ತುಕೊಳ್ಳುವ ಉದ್ದೇಶದಿಂದಲೇ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ ಎಂದು ವಿವರಿಸಿದರು.

ಪ್ರೊಫೆಸರ್ ಹುದ್ದೆ ತೊರೆದು ದೀಕ್ಷೆ ಪಡೆದಿರುವ ಆದಿ ಕರ್ನಾಟಕ ಮಹಾಸಂಸ್ಥಾನ ಗುರುಪೀಠದ ಪ್ರೊ.ಜ್ಞಾನ ಸ್ವರೂಪಾನಂದ ಸ್ವಾಮೀಜಿ ಅವರು ಸಮಾಜಕ್ಕೆ ನಿಜವಾದ ಗುರುವಾಗಲಿ. ಸಮಾಜವನ್ನು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಲಿ ಎಂದು ಹಾರೈಸಿದರು.

ಸಂವಿಧಾನದ ಮೌಲ್ಯಗಳ ಬಗ್ಗೆ ಗೌರವ ಇಲ್ಲದವರ ಕೈಯಲ್ಲಿ, ದುಷ್ಟರ ಕೈಲಿ ಸಂವಿಧಾನ ಉಳಿಯುವುದಿಲ್ಲ. ಆದ್ದರಿಂದ ನಾವು ದುಷ್ಟರ ಹುನ್ನಾರಗಳಿಂದ ಸಂವಿಧಾನ ಉಳಿವಿಗೆ ಬಹಳ ಬದ್ಧತೆಯಿಂದ ಎದ್ದು ನಿಲ್ಲಬೇಕು ಎಂದು ಕರೆ ನೀಡಿದರು.

ನಾನು ಸಿಎಂ ಆಗಲು, ಮಹದೇವಪ್ಪ ಮಂತ್ರಿ ಆಗಲು ಈ ಸಂವಿಧಾನವೇ ಕಾರಣ. ಈಗಲೂ ಮನುಸ್ಮೃತಿ ಪರವಾಗಿರುವ ಮನಸ್ಸುಗಳು ಸಂಚು ನಡೆಸುತ್ತಲೇ ಇವೆ. ಈ ಸಂಚನ್ನು ಸೋಲಿಸೋಣ ಎಂದು ಕರೆ ನೀಡಿ, ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿದರು.

ಮನುಷ್ಮೂರ್ತಿ ದೇಶದಲ್ಲಿ ಪುನರ್ ಸ್ಥಾಪಿಸಲ್ಲಿ ಕೆಲವು ಮನುಷ್ಯ ವಿರೋಧಿ ಸಂಘಟನಗಳು ಪ್ರಾಯತ್ನ ಮಾಡುತ್ತಿದ್ದಾರೆ ಅದರೆ ಆದುರ್ಡ್ ಪರಿಣಾಮಕಾರಿ

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

9 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

12 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

12 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

12 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

12 hours ago