‘ಮನೆ ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮ ಜಾರಿ: ಗೃಹ ಸಚಿವ.ಡಾ. ಜಿ ಪರಮೇಶ್ವರ್

ಬೆಂಗಳೂರು.29.ಮೇ.25:- ರಾಜ್ಯ ಸರ್ಕಾರ ಮನೆ ಮೇನೆಗೆ ಪೊಲೀಸ್ ನೂತನ ಕಾರ್ಯಕ್ರಮ ಚಾಲನೆಗೆ ನಿರ್ಧರಿಸಿದೆ ಈ ಕಾರ್ಯಕ್ರಮಕೆ ಸಿದ್ಧತೆ ನಡೆಸಲಾಗಿದೆ.

ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾದ ಸಂದರ್ಭದಲ್ಲಿ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಪೊಲೀಸರೇ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಶಾಲಾ, ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲಿಯೂ ಭಾಗವಹಿಸಬೇಕು ಎಂದು ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಮಂಡ್ಯದ ಮದ್ದೂರಿನಲ್ಲಿ ಮಗು ಸಾವಿಗೀಡಾದ ಘಟನೆಯಿಂದ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಾಗಿದೆ. ಸಾರ್ವಜನಿಕ ವಲಯದಲ್ಲಿ ಇಂತಹ ಘಟನೆಗಳು ನಡೆಯಬಾರದು. ಇದಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ಸಂಚಾರವನ್ನು ಮೇಲ್ವಿಚಾರಣೆ ಮಾಡಿದ್ದೇನೆ. ಸಂಚಾರ ಸಮಸ್ಯೆ ಹೆಚ್ಚುತ್ತಿದೆ. ಮಳೆ ಬಂದರೆ ಸಂಚಾರ ಮತ್ತಷ್ಟು ಹೆಚ್ಚಾಗುತ್ತದೆ. ಆದರೆ, ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸಮನ್ವಯ ಸಾಧಿಸಿದರೆ ಸಮಸ್ಯೆಯನ್ನು ಪರಿಹರಿಸಬಹುದು. ನಾವು ಶಾಶ್ವತ ಪರಿಹಾರವನ್ನು ಹುಡುಕುತ್ತಿದ್ದೇವೆ ಎಂದು ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

2 minutes ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

5 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

5 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

6 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

6 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

8 hours ago