ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿoದ ಆಚರಿಸಿ-ಎಡಿಸಿ ಶಿವಾನಂದ ಕರಾಳೆ
ಬೀದರ.02.ಸೆಪ್ಟೆಂಬರ್.25:- ಸೆ.7 ರಂದು ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸೆ.17 ರಂದು ವಿಶ್ವ ಕರ್ಮ ಜಯಂತಿಗಳನ್ನು ಕಳೆದ ವರ್ಷದಂತೆ ಈ ವರ್ಷವು ಎಲ್ಲರೂ ಸೇರಿ ವಿಜೃಂಭಣೆಯಿoದ ಆಚರಿಸೋಣ ಎಂದು ಬೀದರ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಕರಾಳೆ ಹೇಳಿದರು.
ಅವರು ಸೋಮವಾರ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಿರುವ ಹಿನ್ನಲೆಯಲ್ಲಿ ಅತಿವೃಷ್ಠಿಯಾಗಿರುವ ಕಾರಣ ಸೆಪ್ಟೆಂಬರ್.7 ರಂದು ಶ್ರೀ ಬಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಸರಳವಾಗಿ ಜಿಲ್ಲೆಯ ಮತ್ತು ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಮಹನೀಯರ ಭಾವಚಿತ್ರಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲು ತೀರ್ಮಾನಿಸಲಾಯಿತು.
ಅದೇ ರೀತಿ ಸೆಪ್ಟೆಂಬರ್. 17 ರಂದು ಬೆಳಿಗ್ಗೆ 11:30 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿಶ್ವ ಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಜಿಲ್ಲಾಧಿಕಾರಿಗಳ ಕಛೇರಿಯಿಂದ ಮೆರವಣಿಗೆ ನಡೆಯಲಿದೆ. ಅಂದು ಮಧ್ಯಾಹ್ನ 1.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮoದರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

