09ಜನವರಿ.25:- ಬರುವ ಜನವರಿ.14 ರಂದು ಶಿವಯೋಗಿ ಸಿದ್ದಾರಾಮೇಶ್ವರ ಜಯಂತಿ, ಜನವರಿ.19 ರಂದು ವೇಮನ ಜಯಂತಿ ಮತ್ತು ಜನವರಿ.21 ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಹಾಗೂ ಫೆಬ್ರವರಿ.1 ರಂದು ಮಡಿವಾಳ ಮಾಚಿದೇವ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರುವ ವಿವಿಧ ಮಹಾನೀಯರ ಜಯಂತಿಗಳ ಆಚರಣೆ ಕುರಿತು ಕರೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸದರಿ ದಿನಾಂಕಗಳಂದು ಸರ್ಕಾರಿ, ಅರೆ ಸರ್ಕಾರಿ, ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 9.30 ಗಂಟೆಗೆ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. 10.45ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಮಹಾತ್ಮರ ಭಾವಚಿತ್ರದ ಮೆರವಣಿಗೆ ಪ್ರಾರಂಭಗೊಂಡು ಶಿವಾಜಿವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಸಂಚರಿಸಿ ನೇರವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರಕ್ಕೆ ತಲುಪಿ ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಜನವರಿ.19 ರಂದು ಬರುವ ಮಹಾಯೋಗಿ ವೇಮನ ಅವರ ಜಯಂತಿಯು ಬೆಳಿಗ್ಗೆ 10 ಗಂಟೆಗೆ ಜಿಲ್ಲಾದಿಕಾರಿಗಳ ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬೆಳಿಗ್ಗೆ 11.30 ಗಂಟೆಗೆ ಹೇಮವೇಮ ಸಮುದಾಯ ಭವನ ಅಮಲಾಪೂರದ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಸದರಿ ದಿನಾಂಕಗಳಂದು ಬರುವ ಜಯಂತಿಗಳ ದಿನ ಮೆರವಣಿಗೆ ಹಾದು ಹೋಗುವ ಮಾರ್ಗಗಳಲ್ಲಿ ಎಲ್ಲ ವೃತ್ತಗಳ ಮೇಲೆ ದೀಪಾಲಂಕಾರ ನರಸಭೆ ವತಿಯಿಂದ ವಾಹನ ವ್ಯವಸ್ಥೆ, ವೃತ್ತದ ಸುತ್ತ-ಮುತ್ತ ಸ್ವಚ್ಚತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಮೆರವಣಿಗೆ ಸಮಯದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ ಹಾಗೂ ಟ್ರಾಫಿಕ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ ಅವರಿಗೆ ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾ ತಂಡಗಳನ್ನು ವ್ಯವಸ್ಥೆ ಮಾಡಲು ಸೂಚಿಸದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಂಜೀವಕುಮಾರ ಅತಿವಾಳ, ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೊನಾರೆ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷರಾದ ಮಾಣಿಕರಾವ ವಾಡೇಕರ, ಜಗನ್ನಾಥ ಜಮಾದಾರ, ಶಂಕರೆಡ್ಡಿ ಚಿಟ್ಟಾ, ಶ್ರೀನಿವಾಸ ರೆಡ್ಡಿ ಬಿಲ್ಲರ್ಗಿ ಸಮಾಜದ ಗಣ್ಯರು, ಸಂಘ ಸಂಸ್ಥೆ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…