ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾನವ ದಿನಗಳ ಸೃಜನೆಯಲ್ಲಿ

*ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾನವ ದಿನಗಳ ಸೃಜನೆಯಲ್ಲಿ


*ಬೀದರ ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿ-ಸಿಇಓ ಡಾ.ಗಿರೀಶ ಬದೋಲೆ

ಬೀದರ.19.ಏಪ್ರಿಲ್.25:-ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಅತೀ ಸಣ್ಣ ರೈತರು ಮತ್ತು ಮಹಿಳೆಯರಿಗೆ ಉದ್ಯೋಗವಕಾಶ ಕಲ್ಪಿಸಿಕೊಟ್ಟು ಅವರ ಸ್ವಾವಲಂಬಿ ಬದುಕಿಗೆ ಆಸರೆಯಾಗುವ ಮಹಾತ್ವಾಕಾಂಕ್ಷಿ ಯೋಜನೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಬೀದರ ಜಿಲ್ಲೆಯು ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ಜಿಲ್ಲೆಗಳಲ್ಲಿ ಬೀದರ ಜಿಲ್ಲೆ ಒಂದಾಗಿದ್ದು ಬೀದರ ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ.


ಬೀದರ ಜಿಲ್ಲೆಗೆ 2024-25ನೇ ಸಾಲಿನಲ್ಲಿ 50.00 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಮಾರ್ಚ.31, 2025ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಬೀದರ ಜಿಲ್ಲೆಯು 62,28,784 ಮಾನವದಿನಗಳನ್ನು ಸೃಜಿಸುವ ಮೂಲಕ 130.58% ಸಾಧನೆ ಮಾಡಿ ರಾಜ್ಯದಲ್ಲಿ ಅತೀ ಹೆಚ್ಚು ಮಾನವದಿನ ಸೃಜನೆ ಮಾಡಿದ ಜಿಲ್ಲೆಗಳಲ್ಲಿ 3ನೇ ಸ್ಥಾನವನ್ನು ಪಡೆದಿದೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಮೊದಲನೆ ಸ್ಥಾನದಲ್ಲಿದೆಂದರು.


ಬೀದರ ಜಿಲ್ಲೆಯಲ್ಲಿ 2,57,344 ಉದ್ಯೋಗ ಚೀಟಿಗಳಿದ್ದು ಅದರಲ್ಲಿ 1,62,841 ಕ್ರಿಯಾಶೀಲ ಉದ್ಯೋಗ ಚೀಟಿಗಳಿರುತ್ತವೆ. ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 1,27,932 ಕುಟುಂಬಗಳಿಗೆ ಕೂಲಿ ನೀಡಲಾಗಿದೆ. ಅದರಲ್ಲಿ 31,190 ಕುಟುಂಬಗಳು ಪರಿಶಿಷ್ಟಜಾತಿಗೆ ಸೇರಿದ್ದರೆ 22,524 ಕುಟುಂಬಗಳು ಪರಿಶಿಷ್ಟ ಪಂಗಡಕ್ಕೆ ಸೇರಿರುತ್ತವೆ. ಅತೀ ಸಣ್ಣ ರೈತರು ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಕುಟುಂಬಗಳು 74,217 ಆಗಿರುತ್ತದೆ, ಒಟ್ಟು ಕೂಲಿಕಾರರಲ್ಲಿ 1,07,984 ಮಹಿಳೆಯರಿಗೆ ಕೂಲಿ ಕೆಲಸ ನೀಡಲಾಗಿದೆ. ಒಟ್ಟು ಸೃಜಿಸಿದ 62,28,784 ಮಾನವ ದಿನಗಳಲ್ಲಿ 35,62,252 ಮಾನವ ದಿನಗಳನ್ನು ಮಹಿಳಾ ಕೂಲಿಕಾರರಿಂದ ಸೃಜಿಸಲಾಗಿದ್ದು, ಇದು ಪ್ರತಿಶತ 54.56% ಆಗಿರುತ್ತದೆ. 519 ವಿಕಲಚೇತನರಿಗೆ ಕೂಲಿ ಕೆಲಸ ನೀಡಲಾಗಿದೆ. ಬೀದರ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 1033 ಕುಟುಂಬಗಳ ಕೂಲಿಕಾರರು ಪೂರ್ಣ 100 ದಿನಗಳ ಕೆಲಸ ಪಡೆದಿರುತ್ತಾರೆಂದರು.


ಮಹಾತ್ಮಗಾAಧಿ ನರೇಗಾ ಯೋಜನೆಯು ಜಿಲ್ಲೆಯ ಗ್ರಾಮೀಣ ಪ್ರದೇಶದ ಕುಟುಂಬಗಳ ಆರ್ಥಿಕ ಪುನಶ್ಚೇತನಕ್ಕೆ ನೆರವಾಗುವುದಲ್ಲದೆ ಬಡ ಕೂಲಿಕಾರ್ಮಿಕರು ಉದ್ಯೋಗ ಅರಸಿ ಮುಂಬೈ, ಪುಣೆ, ಹೈದರಾಬಾದ ಮತ್ತು ಬೆಂಗಳೂರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವಲ್ಲಿ ಸಹಕಾರಿಯಾಗಿದೆ. ಹಾಗೆಯೇ ಬೀದರ ಜಿಲ್ಲೆಯ ಗ್ರಾಮೀಣ ಕೂಲಿಕಾರರು 2025-26ನೇ ಸಾಲಿನಲ್ಲಿಯೂ ಸಹ ಅತೀ ಹೆಚ್ಚು ಸಂಖ್ಯೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago