ಪುಣೆ.15.ಜೂನ್.25:- ಪುಣೆ ಸೇತುವೆ ಕುಸಿತ: ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ, ವಾರಾಂತ್ಯದ ಕಾರಣ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಸಂದರ್ಶಕರು ಜಮಾಯಿಸಿದ್ದರು.
ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಭಾನುವಾರ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕೆಲವರು ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಮಾವಲ್ ತಹಸಿಲ್‌ನ ಕುಂದಮಾಲಾ ಪ್ರದೇಶದ ಬಳಿ ನಡೆದ ಈ ಘಟನೆಯ ನಂತರ ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವಲ್ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಲೆಗಾಂವ್ ದಭಾಡೆ ಪಟ್ಟಣದ ಬಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಕುಸಿದಿದೆ.
ಅನೇಕ ಪ್ರವಾಸಿಗರು ಇಂದ್ರಯಾಣಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಮತ್ತು 20 ರಿಂದ 25 ಜನರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.
ಪುಣೆಯ ಮಾವಲ್‌ನಲ್ಲಿರುವ ಕುಂಡ್ ಮಾಲ್‌ನಲ್ಲಿ ಸೇತುವೆ ಕುಸಿದು ಕೆಲವು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್‌ನ ತಲೆಗಾಂವ್ ದಭಾಡೆ ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಇನ್ನು ಈ ಸೇತುವೆ ಏಕಾಏಕಿ ಕುಸಿದು ಬೀಳಲು ಕಾರಣ ಏನೆಂಬುದು ತಿಳಿದಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುರಿದಿದೆ.
ಭಾನುವಾರವಾದ್ದರಿಂದ, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಇದ್ದರು. ಕೆಲವರು ಸೇತುವೆಯ ಮೇಲೆ ನಿಂತಿದ್ದರು. ಆ ಸಮಯದಲ್ಲಿ, ಈ ಸೇತುವೆ ಕುಸಿದಿದೆ. ಇದರಲ್ಲಿ ಎಷ್ಟು ಜನರು ಮುಳುಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುಮಾರು 20 ರಿಂದ 25 ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗುತ್ತಿದೆ.
ರಾಯಚೂರು.03.ಆಗಸ್ಟ್.25: ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ…
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…