05 ಡಿಸೆಂಬರ್ 24 ಮಹಿಳಾ ಕ್ರಿಕೆಟ್‌ನಲ್ಲಿ, ಬ್ರಿಸ್ಬೇನ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. 101 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ 16.2 ಓವರ್‌ಗಳಲ್ಲಿ ಆರಾಮವಾಗಿ ಮೊತ್ತವನ್ನು ತಲುಪಿತು. ಆಸ್ಟ್ರೇಲಿಯಾದ ಜಾರ್ಜಿಯಾ ವೋಲ್ 46 ರನ್ ಗಳಿಸಿ ಅಜೇಯರಾಗಿ ಉಳಿದು ಪಂದ್ಯದ ಗರಿಷ್ಠ ಸ್ಕೋರರ್ ಎನಿಸಿಕೊಂಡರು.
ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪ್ರವಾಸಿಗರು ಕೇವಲ 34.2 ಓವರ್‌ಗಳಲ್ಲಿ 100 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಜೆಮಿಮಾ ರೋಡ್ರಿಗಸ್ 23 ರನ್ ಗಳಿಸಿ ಟಾಪ್ ಸ್ಕೋರರ್ ಆಗಿದ್ದರೆ, ಮೇಗನ್ ಶುಟ್ 5 ವಿಕೆಟ್ ಪಡೆದು ಮಿಂಚಿದರು.
ಸರಣಿಯ ಎರಡನೇ ಪಂದ್ಯ ಡಿಸೆಂಬರ್ 8 ರಂದು ಬ್ರಿಸ್ಬೇನ್‌ನಲ್ಲಿ ನಡೆಯಲಿದೆ.
