06/07/2025 12:45 AM

Translate Language

Home » ಲೈವ್ ನ್ಯೂಸ್ » ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Facebook
X
WhatsApp
Telegram

ಬೀದರ.05.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು.


ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಕಲಬುರಗಿ ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.


ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಮಹಿಳಾ ಪೊಲೀಸರ ತಂಡ ಅಕ್ಕ ಪಡೆ ಮಾದರಿ ಹಾಗೂ ಶ್ಲಾಘನೀಯವಾಗಿದೆ. ಇಂಥ ಪಡೆಯನ್ನು ಪ್ರತಿ ಜಿಲ್ಲೆಯಲ್ಲೂ ರಚಿಸುವಂತೆ ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಸಚಿವೆ ಹೆಬ್ಬಾಳಕರ್ ತಿಳಿಸಿದರು. ಕಳೆದೆರಡು ದಿನಗಳಿಂದ ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಅಧಿಕಾರಿಗಳ ಸಭೆಯಲ್ಲಿ ಹಲವಾರು ವಿಷಯಗಳನ್ನು ಸುಧೀರ್ಘವಾಗಿ ಚರ್ಚಿಸಲಾಗಿದೆ.


ಮಕ್ಕಳ, ಮಹಿಳೆಯರ, ಗರ್ಭೀಣಿಯರ, ಅಂಗವಿಕಲರ ಹಾಗೂ ಹಿರಿಯ ನಾಗರಿಕರಿಗೆ ಸರಕಾರವು ಅನುಷ್ಠಾನಗೊಳಿಸಿದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಲಿಗೆ ನಿರ್ದೇಶನ ನೀಡಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕ್ಷೇತ್ರ ಮಟ್ಟದಲ್ಲಿ ಯೋಜನೆಗಲನ್ನು ಹೆಚ್ಚು ಪ್ರಚಾರ ಕೈಗೊಂಡು ಸಮಸ್ಯೆಗಳನ್ನು ಬಗೆಹರಿಸಿ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಿಸಬೇಕೆಂದರು.


ಅಂಗನವಾಡಿ ಸಹಾಯಕಿಯರ ನೇಮಕಾತಿಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು 90 ದಿನಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಭಾಗ್ಯಲಕ್ಷ್ಮೀ ಯೋಜನೆಯಡಿ ರಾಜ್ಯಾದ್ಯಂತ 1.60 ಸಾವಿರ ಹೆಣ್ಣು ಮಕ್ಕಳಿಗೆ ಬಾಂಡ್ ವಿತರಿಸಲು ಕ್ರಮ ಕೈಗೊಳ್ಳುತ್ತಿದ್ದು ಈ ಪೈಕಿ 20 ಸಾವಿರ ಜನರ ವಿಳಾಸ ಸರಿಯಾಗಿ ಸಿಗುತ್ತಿಲ್ಲ. ಅವರ ಪಾಲಕರು ಸಂಪರ್ಕಿಸಿ ಪಡೆಯಬಹುದಾಗಿದೆಯೆಂದರು.


ಗೃಹಲಕ್ಷ್ಮೀ ಯೋಜನೆಯಡಿ ಕಲಬುರಗಿ ವಿಭಾಗದಲ್ಲಿ 10 ಸಾವಿರ ಕೋಟಿ ಅನುದಾನವನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕೆ ಸಂದಾಯವಾಗಿದೆ. ಈ ಕುರಿತು ಕಿರುಚಿತ್ರವೊಂದನ್ನು ನಿರ್ಮಿಸಲಾಗುವುದೆಂದರು. ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಶೀಘ್ರವೇ ಆರಂಭಿಸಲಾಗುವುದು. ಈ ಸಂಘಗಳ ಮೂಲಕ ವಿವಿಧ ರೀತಿಯ ಸಹಾಯ ಸೌಲಭ್ಯಗಳನ್ನು ವಿತರಿಸಲಾಗುವದೆಂದರು.


ಅಂಗವಿಕಲರ ಯುಡಿಐ ಕಾರ್ಡ ವಿತರಣೆಯಲ್ಲಿರುವ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಲಾಉವುದು. ಮಕ್ಕಳ ಹಾಗೂ ಮಹಿಳೆಯರ ಕಳ್ಳ ಸಾಗಾಣಿಕೆ, ಭಿಕ್ಷಟನೆ ಕುರಿತು ತೀವೃ ನಿಗಾ ವಹಿಸುವಂತೆ ಅದಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆಯೆಂದರು. ಬೀದರ ಜಿಲ್ಲೆಯಲ್ಲಿ ಮೊಟ್ಟೆ ವಿತರಣೆ ಸಮಸ್ಯೆ ಕುರಿತು ಗಮನಕ್ಕೆ ಬಂದಿದ್ದು, ರಾಜ್ಯದ ಇತರೆ ಜಿಲ್ಲೆಗಳಂತೆ ಬಾಲವಿಕಾಸ ಸಮಿತಿಗೆ ಮೊಟ್ಟೆ ಅನುದಾನ ಸಂದಾಯವಾಗುವಂತೆ ಕ್ರಮಕೈಗೊಳ್ಳಲಾಗುಗುದೆಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!