ಬೆಂಗಳೂರು.03.ಏಪ್ರಿಲ್.25:- ಕೇಂದ್ರ ಸರಕಾರ ಸಂಸದನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗಿ ಎರಡು ವರ್ಷವಾಗಿದೆ. ಇನ್ನೂ ಯಾವಾಗ ಜಾರಿಗೆ ತರುತ್ತಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸವಾಲು ಹಾಕಿದ್ದಾರೆ.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಧರಣಿಯಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷ ಮಹಿಳೆಯರನ್ನು ಮತ್ತು ದೇಶದ ಜನರಿಗೆ ಪ್ರತಿದಿನ ಮೂರ್ಖರನ್ನಾಗಿಸುತ್ತಿದ್ದಾರೆ. ಕೇಂದ್ರ ಸರಕಾರಕ್ಕೆ ಮಹಿಳೆಯರ ಮತ ಬೇಕು. ದೇವಿ, ಸರಸ್ವತಿ, ಲಕ್ಷ್ಮಿ, ನಾರಿಶಕ್ತಿ ಎಂದು ಪ್ರತಿವರ್ಷ ಮಾ.8ಕ್ಕೆ ಮಹಿಳಾ ದಿನಾಚರಣೆ ಮಾಡಿ ಬಿಜೆಪಿಯವರು ಮತ್ತು ನರೇಂದ್ರ ಮೋದಿ ಅವರು ಹೊಗಳುತ್ತಾರೆ. ಆದರೆ ನಿಜವಾದ ಗೌರವವಿದ್ದರೆ ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಚುನಾವಣೆಗಾಗಿ ಶೇ.33ರಷ್ಟು ಮೀಸಲಾತಿ ಪಾಸ್ ಮಾಡಿದ್ದಾರೆ. ಆದರೆ ಇನ್ನೂ ಜಾರಿ ಮಾಡಿಲ್ಲ. ನಮಗೆ ಸಿಹಿ ತೋರಿಸಿದ್ದಾರೆ. ಆದರೆ ಅದನ್ನು ತಿನ್ನಲು ಬಿಡುತ್ತಿಲ್ಲ. ರಾಜ್ಯ, ದೇಶದಲ್ಲಿ ಮಹಿಳೆಯರು ಶೇ.50ರಷ್ಟು ಇದ್ದೇವೆ. ಸಂಸತ್ತಿನಲ್ಲಿ ಶೇ.15, 16ರಷ್ಟು ಮಾತ್ರ ಇದ್ದೇವೆ. ರಾಜ್ಯದಲ್ಲೂ ಶೇ.4ರಷ್ಟು ಜನ ಮಹಿಳೆಯರು ವಿಧಾನ ಸಭೆಯಲ್ಲಿ ಇದ್ದಾರೆ. 224 ಜನರಲ್ಲಿ 10ಜನ ಮಾತ್ರ ಮಹಿಳೆಯರು ಇರೋದು, ನಾವು ಎಷ್ಟು ದಿನ ಸುಮ್ಮನೆ ಇರಬೇಕು ಎಂದು ಪ್ರಶ್ನಿಸಿದರು.
ರಾಜ್ಯ, ದೇಶದಲ್ಲಿ ಅರ್ಧದಷ್ಟು ಮಹಿಳೆಯರು ಇದ್ದರೂ ಕೂಡ, ಮಹಿಳೆಯರನ್ನು ಪ್ರತಿನಿಧಿಸುವವರು ಇಲ್ಲ. ಕೇಂದ್ರ ಬಿಜೆಪಿಗೆ ಮಹಿಳೆಯರಾಗಿರಲಿ, ಅಲ್ಪಸಂಖ್ಯಾತರಾಗಿರಲಿ, ದಲಿತರಾಗಿರಲಿ ಅವರ ಬಗ್ಗೆ ಕಾಳಜಿ ಇಲ್ಲ ಆದರೆ, ಅಧಿಕಾರ ಬೇಕು. ರಾಜ್ಯದಲ್ಲೂ ಬಿಜೆಪಿ ಇದ್ದಾಗ ಅಭಿವೃದ್ಧಿ ಮಾಡಲಿಲ್ಲ ಎಂದು ಕಿಡಿಕಾರಿದರು.
ಇಡೀ ದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ. ಅವಕಾಶಗಳು ಸಿಗುತ್ತಿಲ್ಲ. 2ವರ್ಷಗಳಿಂದ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ. ಮಹಿಳೆಯರ ಸಬಲೀಕರಣ ಆಗಬೇಕಾದರೆ ಶೀಘ್ರದಲ್ಲೇ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಧರಣಿಯಲ್ಲಿ ಭಾಗವಹಿಸಿದ್ದ ಮಹಿಳಾ ಕಾಂಗ್ರೆಸ್ ಸದಸ್ಯರು ಮಹಿಳಾ ವಿರೋಧಿ ಕೇಂದ್ರ ಸರಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…