ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕಾಂಶಗಳ ಪ್ರಾಮುಖ್ಯತೆ ಕುರಿತು ಒಂದು ದಿನದ ಕಾರ್ಯಾಗಾರ


ಬೀದರ.04.ಫೆಬ್ರುವರಿ.25:- ಆಶಾ ಕಾರ್ಯಕರ್ತೆಯರ ಪಾತ್ರoಬಹಳ ಮಹತ್ವದಾಗಿದ್ದು, ಗರ್ಭಿಣಿ ಮಹಿಳೆಯರಿಗೆ ಮನೆ ಮನೆಗೆ ಭೇಟಿ ನೀಡಿ ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಮಾಹಿತಿಯನ್ನು ನೀಡುವುದು, ನಾಲ್ಕು ಬಾರಿ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಹಾಗೂ ಎಲ್ಲಾ ಹೆರಿಗೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂಬುದಾಗಿ ಅವರು ಸಲಹೆ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಅವಲಂಬನೆ ಕಡಿಮೆ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದರು. ತಾಯಿ ಮತ್ತು ಮಗು ಆರೋಗ್ಯ ಸಮಸ್ಯೆಯಿಂದ ಪ್ರಾಣ ಕಳೆದುಕೊಳ್ಳದಂತೆ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಕರೆ ನೀಡಿದರು.


ಅವರು ಇಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ)-ಬೆಂಗಳೂರು, ಕೆ.ಎಸ್.ಸಿ.ಎಸ್.ಟಿ ಪ್ರಾದೇಶಿಕ ಕೇಂದ್ರ ಕಲಬುರ್ಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೀದರ ಅವರ ಸಹಯೋಗದಲ್ಲಿ ಬೀದರ ಜಿಲ್ಲಾ ಪಂಚಾಯತದಲ್ಲಿ ಹಮ್ಮಿಕೊಂಡಿದ್ದ “ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕಾಂಶಗಳ ಪ್ರಾಮುಖ್ಯತೆ” ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.


ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರ ಕುಮಾರ ದುಬೆ ಅವರು ಉತ್ತಮ ಆರೋಗ್ಯ, ನೈರ್ಮಲ್ಯ ಮತ್ತು ಸಮತೋಲನ ಪೌಷ್ಠಿಕ ಆಹಾರದ ಪ್ರಾಮುಖ್ಯತೆಯನ್ನು ವಿವರಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್.ಓ. ಡಾ.ಮಹಾದೇವಪ್ಪ ಮಳಗೆ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್.ಓ. ಡಾ.ಮಹಾದೇವಪ್ಪ ಮಳಗೆ ಅವರು ಮಾತನಾಡಿ, ಆಶಾ ಕಾರ್ಯಕರ್ತೆಯರನ್ನು ಉತ್ತೇಜಿಸಿ, ಮಗು ಹುಟ್ಟಿದ ಅರ್ಧ ಗಂಟೆಯೊಳಗೆ ಎದೆ ಹಾಲು ಕುಡಿಸಲು ಪ್ರಾರಂಭಿಸಿ ಆರು ತಿಂಗಳವರೆಗೆ ಒಂದು ಹನಿ ನೀರು ಸಹ ಕುಡಿಸದೇ ಎದೆ ಹಾಲು ಮಾತ್ರ ಕುಡಿಸಬೇಕು. ಮತ್ತು ಆರು ತಿಂಗಳ ಮುಗಿದ ಮರುದಿವಸೇ ಎದೆ ಹಾಲಿನ ಜೊತೆಗೆ ಪೂರಕ ಪೌಷ್ಟಿಕ ಆಹಾರ ಮಗುವಿಗೆ ನೀಡಬೇಕು ಇದರಿಂದ ಶಿಶುಮರಣ ಮತ್ತು ತಾಯಿಮರಣ ತಡೆಗಟ್ಟಬಹುದು ಎಂದು ಮನವರಿಕೆ ಮಾಡಿಸಿದರು.


ಬೆಂಗಳೂರು ಕೆ.ಎಸ್.ಸಿ.ಎಸ್.ಟಿ. ಯೋಜನಾ ಅಭಿಯಂತರರಾದ ಡಾ. ಸೈಯದ್ ಸಮೀರ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡುತ್ತ, ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಠಿಕತೆ ಕುರಿತು ಆಶಾಕಾರ್ಯಕರ್ತೆಯರು ಈ ಕಾರ್ಯಾಗಾರದಿಂದ ಸೂಕ್ತ ತರಬೇತಿ ಪಡೆದು, ಅದನ್ನು ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದರು. ಉತ್ತಮ ಆರೋಗ್ಯ ನಮ್ಮೆಲ್ಲರ ಹಕ್ಕು ಎಂಬುದನ್ನು ಅವರು ಪುನರುಚ್ಛರಿಸಿದರು.

ಪ್ರತಿಯೊಬ್ಬರು ತಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ನಿಷ್ಪಕ್ಷವಾಗಿ ಮಾಡಿ ಒಂದು ಉತ್ತಮ ಆರೋಗ್ಯಕರ ಸಮಾಜದ ನಿರ್ಮಾಣ ಮಾಡಬೇಕು ಎಂದರು
ಕಾರ್ಯಾಗಾರದಲ್ಲಿ ಡಾ. ಸಂಗೀತ ಹಾಲ್ಬಂಡೆ, ಡಾ. ಜಗನ್ನಾಥ್.ವಿ ಗೌಡ್ಗೆ, ಡಾ. ಸೈಯದ್ ಸಮೀರ ಮತ್ತು ಡಾ.ಮಹಮ್ಮದ ಸಹೀಲ ಹುಸೇನ್ ಅವರು ತಮ್ಮ ಪರಿಣಿತ ಉಪನ್ಯಾಸಗಳ ಮೂಲಕ ಆಶಾಕಾರ್ಯಕರ್ತೆಯರಿಗೆ ಅವಶ್ಯಕ ಮಾಹಿತಿ ಒದಗಿಸಿದರು.


ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ಆಶಾಕಾರ್ಯಕರ್ತೆಯರು ತಮ್ಮ ಅನುಭವ ಹಂಚಿಕೊಳ್ಳುತ್ತಾ ಇಂತಹ ತರಬೇತಿ ಕಾರ್ಯಕ್ರಮಗಳು ಇನ್ನಷ್ಟು ನಡೆಯಬೇಕೆಂದು ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ಕೆ.ಎಸ್.ಸಿ.ಎಸ್.ಟಿ ಪ್ರಾದೇಶಿಕ ಕೇಂದ್ರ ಕಲ್ಬುರ್ಗಿಯ ಯೋಜನಾ ಸಂಯೋಜಕರಾದ ವಿಶ್ವಪ್ರಸನ್ನ ಮತ್ತು ಬೀದರ್ ಜಿಲ್ಲೆಯ ಎನ್.ಆರ್.ಡಿ.ಎಂ.ಎಸ ಕೇಂದ್ರದ ಜಿಲ್ಲಾ ಪಂಚಾಯತ ಮಹೇಶ ರೆಡ್ಡಿ ಸೇರಿದಂತೆ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

8 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

11 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

11 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

11 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

11 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

11 hours ago