10/06/2025 1:45 PM

Translate Language

Home » ಲೈವ್ ನ್ಯೂಸ್ » ಮಹಿಳೆಯರ ಮೇಲಿನ ಲೈಂಗಿಕ ಕಿರಿಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಮಹಿಳೆಯರ ಮೇಲಿನ ಲೈಂಗಿಕ ಕಿರಿಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

Facebook
X
WhatsApp
Telegram

ಬೀದರ.16.ಮಾರ್ಚ.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಬೀದರ ಜಿಲ್ಲೆಯ, ಎಲ್ಲಾ ಸರಕಾರಿ / ಖಾಸಗಿ ಕಚೇರಿಗಳು,  ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮೆಗಳು, ಕಾರ್ಖಾನೆಗಳು/  ಗಾರ್ಮೇಟ್ಸ್ ಫ್ಯಾಕಟರಿಗಳು, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬರುವ ಸರಕಾರಿ / ಖಾಸಗಿ ಸಂಸ್ಥೆಗಳು, ಅಂಚೆ ಕಚೇರಿಗಳು, ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ/ಸಿಬ್ಬಂದಿಯವರ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಎಲ್ಲಾ ಇಲಾಖೆಗಳಲ್ಲಿ ಒಂದು ಆಂತರಿಕ ದೂರು ಸಮಿತಿ ರಚನೆ ಮಾಡಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.


ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮ, 2013 ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ.


ಎಲ್ಲಿ ಆಂತರಿಕ ದೂರು ಸಮಿತಿ ರಚನೇಯಾಗಿರುವುದಿಲ್ಲವೋ, ಅಲ್ಲಿ ಕೂಡಲೇ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು. ಹಾಗೂ ಈಗಾಗಲೇ ದೂರು ಸಮಿತಿ ರಚನೆಯಾಗಿದ್ದಲ್ಲಿ, ಆಂತರಿಕ ದೂರು ಸಮಿತಿಗಳ ಮುಂದೆ ಬಾಕಿ ಉಳಿದಿರುವ ಪ್ರಕರಣಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿರುವ ಬಗ್ಗೆ ಪರಿಶೀಲಿಸುವುದು ಹಾಗೂ ಆಂತರಿಕ ದೂರು ಸಮಿತಿಯ ವಿವರಗಳನ್ನು ಪರಿಷ್ಕ್ರತ SHe Box Portal  ನಲ್ಲಿ ಅಪ್ಲೋಡ್ ಮಾಡುವುದು. “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ” ಕಾಯ್ದೆಯ ಪ್ರತಿಯೊಂದು ನಿಂಬಂಧನೆಗಳ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸುವುದು ಹಾಗೂ ಔಪಚಾರಿಕ ಮತ್ತು ಔಪಚಾರಿಕವಲ್ಲದ/ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ಸುರಕ್ಷಿತ ಕೆಲಸದ ವಾತಾವರಣವನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚಿಸಲಾಗಿದೆ.

ಸದರಿ ವರದಿಯನ್ನು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ದಿನಾಂಕ: 25-03-2025ರ ಒಳಗಾಗಿ ರಚನೆಯಾದ ಸಮಿತಿಯ ಮಾಹಿತಿಯನ್ನು  ಕಡ್ಡಾಯವಾಗಿ SHe Box Portal  ನಲ್ಲಿ ಅಪ್ಲೋಡ್ ಮಾಡಿ, ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರ ದೂರವಾಣಿ ಸಂಖ್ಯೆ: 9980702545,  8310032095 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!