ಬೀದರ.16.ಮಾರ್ಚ.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಬೀದರ ಜಿಲ್ಲೆಯ, ಎಲ್ಲಾ ಸರಕಾರಿ / ಖಾಸಗಿ ಕಚೇರಿಗಳು, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮೆಗಳು, ಕಾರ್ಖಾನೆಗಳು/ ಗಾರ್ಮೇಟ್ಸ್ ಫ್ಯಾಕಟರಿಗಳು, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬರುವ ಸರಕಾರಿ / ಖಾಸಗಿ ಸಂಸ್ಥೆಗಳು, ಅಂಚೆ ಕಚೇರಿಗಳು, ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ/ಸಿಬ್ಬಂದಿಯವರ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಎಲ್ಲಾ ಇಲಾಖೆಗಳಲ್ಲಿ ಒಂದು ಆಂತರಿಕ ದೂರು ಸಮಿತಿ ರಚನೆ ಮಾಡಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮ, 2013 ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ.
ಎಲ್ಲಿ ಆಂತರಿಕ ದೂರು ಸಮಿತಿ ರಚನೇಯಾಗಿರುವುದಿಲ್ಲವೋ, ಅಲ್ಲಿ ಕೂಡಲೇ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು. ಹಾಗೂ ಈಗಾಗಲೇ ದೂರು ಸಮಿತಿ ರಚನೆಯಾಗಿದ್ದಲ್ಲಿ, ಆಂತರಿಕ ದೂರು ಸಮಿತಿಗಳ ಮುಂದೆ ಬಾಕಿ ಉಳಿದಿರುವ ಪ್ರಕರಣಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿರುವ ಬಗ್ಗೆ ಪರಿಶೀಲಿಸುವುದು ಹಾಗೂ ಆಂತರಿಕ ದೂರು ಸಮಿತಿಯ ವಿವರಗಳನ್ನು ಪರಿಷ್ಕ್ರತ SHe Box Portal ನಲ್ಲಿ ಅಪ್ಲೋಡ್ ಮಾಡುವುದು. “ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ” ಕಾಯ್ದೆಯ ಪ್ರತಿಯೊಂದು ನಿಂಬಂಧನೆಗಳ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸುವುದು ಹಾಗೂ ಔಪಚಾರಿಕ ಮತ್ತು ಔಪಚಾರಿಕವಲ್ಲದ/ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ಸುರಕ್ಷಿತ ಕೆಲಸದ ವಾತಾವರಣವನ್ನು ಕಡ್ಡಾಯವಾಗಿ ಜಾರಿಗೆ ತರಲು ಸೂಚಿಸಲಾಗಿದೆ.
ಸದರಿ ವರದಿಯನ್ನು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ದಿನಾಂಕ: 25-03-2025ರ ಒಳಗಾಗಿ ರಚನೆಯಾದ ಸಮಿತಿಯ ಮಾಹಿತಿಯನ್ನು ಕಡ್ಡಾಯವಾಗಿ SHe Box Portal ನಲ್ಲಿ ಅಪ್ಲೋಡ್ ಮಾಡಿ, ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರ ದೂರವಾಣಿ ಸಂಖ್ಯೆ: 9980702545, 8310032095 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…