Categories: ದೇಶ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ತಡೆ ಕುರಿತು ಜನ ಜಾಗೃತಿಯನ್ನು ಮೂಢಿಸಬೇಕು-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ


ಬೀದರ, ನವೆಂಬರ್.27:-ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗಳು ಹಾಗೂ ಅಂಗಾAಗಳ ಮಾರಾಟ ಇಂತಹ ಕೆಲಸಗಳು ನಡೆಯುತ್ತಿವೆ. ಜಿಲ್ಲಾ, ತಾಲ್ಲೂಕಾ ಮತ್ತು ಗ್ರಾಮ ಮಟ್ಟಗಳಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ಹಮ್ಮಿಕೊಂಡು ಇದರ ಬಗ್ಗೆ ಪರಾಮರ್ಶಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಈ ಕುರಿತು ಜನ ಜಾಗೃತಿಯನ್ನು ಮೂಡಿಸಬೇಕು ಇದರಲ್ಲಿ ಎಲ್ಲರ ಪಾತ್ರ ಹಿರಿದಾಗಿರುತ್ತದೆಂದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶಮಾ ತಿಳಿಸಿದರು.


ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಡನಾಡಿ ಸೇವಾ ಸಂಸ್ಥೆ ಮೈಸೂರು, ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಬೀದರ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಬೀದರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸಂಸ್ಕೃತಿಕ ಭವನ ಸಭಾಂಗಣ, ಕರ್ನಾಟಕ ಸಾಹಿತ್ಯ ಸಂಘ, ಬೀದರನಲ್ಲಿ ಹಮ್ಮಿಕೊಂಡಿದ್ದ “ಮಾನವ ಕಳ್ಳ ಸಾಗಾಣಿಕೆ ತಡೆ” ಕುರಿತು ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳಿಗೆ ಒಂದು ದಿನದ ಕಾರ್ಯಾಗಾರವವನ್ನು ಉದ್ಘಾಟಿಸಿ ಮಾತನಾಡಿದರು.


ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಎ. ಬನಸೋಡೆ ಬೀದರ ಅವರು ಮಾತನಾಡಿ, ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಹಕ್ಕನ್ನು ಕೊಟ್ಟಿರುತ್ತದೆ. ಆದರೆ ಮಹಿಳೆಯರ ಮತ್ತು ಮಕ್ಕಳ ಬದುಕುವ ಹಕ್ಕನ್ನು ನಾವು ಕಸಿದುಕೊಂಡಿದ್ದೇವೆ. ಆದ್ದರಿಂದ ಮಹಿಳೆಯರು ಉನ್ನತ ಶಿಕ್ಷಣವನ್ನು ಪಡೆದುಕೊಂಡು ಎಲ್ಲಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಿದ್ದಾರೆ.

ಮಾನವ ಕಳ್ಳ ಸಾಗಾಣಿಕೆಗೆ ತುತ್ತಾಗುತ್ತಿರುವವರು ಮಹಿಳೆಯರು ಮತ್ತು ಮಕ್ಕಳೇ ಜಾಸ್ತಿಯಾಗಿದ್ದಾರೆ. ಹಾಗಾಗಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ನಾವು ಶಿಕ್ಷಣವಂತರನ್ನಾಗಿ ಮಾಡಬೇಕು ಹಾಗೂ ಅವರಿಗೆ ಕಾನೂನಿನ ಬಗ್ಗೆ ಅರಿವನ್ನು ನೀಡಬೇಕು ಅಂದಾಗ ಮಾತ್ರ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಲು ಸಾಧ್ಯ ಎಂದು ಹೇಳಿದರು.

ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿಗಳಾದ ಸ್ಟಾö್ಯನಿ ಕೆ.ವಿ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಅನಿಷ್ಠ ಪದ್ಧತಿಯಾಗಿದೆ. ನಮ್ಮ ದೇಶವು ಮುಂದುವರೆದ ರಾಷ್ಟçವಾದರೂ ಕೂಡ ಇನ್ನೂ ಮಾನವ ಕಳ್ಳ ಸಾಗಾಣಿಕೆ ಕುರಿತು ಮಾತನಾಡುವುದು ದುರಂತರ ಸಂಗತಿಯಾಗಿದೆ.

ಈ ಒಂದು ಕರಾಳ ಮುಖದಡಿಯಲ್ಲಿ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸುವುದು, ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವುದು ಹಾಗೂ ದೇಹದ ಅಂಗಗಳನ್ನು ತೆಗೆಯುವುದು ಮಾರಾಟ ಮಾಡುವುದು ಹೀಗೆ ಇದರ ಹಿಂದೆ ಹಲವಾರು ಚಟುವಟಿಕೆಗಳು ಅಹಿತಕರವಾಗಿ ನಡೆಯುತ್ತಿದೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸುತ್ತಿದೆ. ಇದು ಒಂದು ದಿನದ ಪ್ರಕ್ರಿಯೆಯಲ್ಲ ಮಾನವ ಕಳ್ಳ ಸಾಗಾಣಿಕೆ ನಿರಂತರ ಪ್ರಕ್ರಿಯೆಯಾಗಿದೆ.

     ಇದನ್ನು ನಿವಾರಿಸಲು ಎಲ್ಲಾ ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯವರು ಸೇರಿ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಬೇಕು. ಆದ್ದರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಡನಾಡಿ ಸೇವಾ ಸಂಸ್ಥೆ ಮೈಸೂರು ಹಾಗೂ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಇದು ಗ್ರಾಮ ಮಟ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಗಳಿಗೆ ಬಲವರ್ಧನೆ ಮಾಡಿ, ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸಿ, ಈ ಮಾನವ ಕಳ್ಳ ಸಾಗಾಣಿಕೆಯನ್ನು ಹೋಗಲಾಡಿಸಬೇಕೆಂದು ನುಡಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಅನಿಷ್ಠ ಪದ್ಧತಿಯಾಗಿದೆ.

    ಇದನ್ನು ತಡೆಗಟ್ಟಲು ನಾವು ಪ್ರತಿ ತಿಂಗಳು ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಸಭೆಗಳನ್ನು ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೆ ಆಯೋಜಿಸಲಾಗುತ್ತದೆ. ಇದರಲ್ಲಿ ಪೊಲೀಸ ಇಲಾಖೆ ಹಾಗೂ ಎಲ್ಲಾ ಸಹಭಾಗೀದಾರ ಇಲಾಖೆಗಳ ಪಾತ್ರ ಮುಖ್ಯವಾಗಿರುತ್ತದೆ.

   ಇದರ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ನಮ್ಮ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಈ ಕುರಿತು ಮಾಹಿತಿಯನ್ನು ಪೊಲೀಸ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೀಡಬೇಕು. ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯ ಜಾಲವನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ಮತ್ತು ದಂಡವನ್ನು ವಿಧಿಸಬೇಕು ಇದಕ್ಕೆ ಎಲ್ಲಾ ಸಹಭಾಗೀದಾರ ಇಲಾಖೆಯವರು ಸಹಕರಿಸಬೇಕೆಂದು ತಿಳಿಸಿದರು.


ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪರಶುರಾಮ ಎಂ.ಎಲ್ ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ, ಮೈಸೂರು ಹಾಗೂ ನಿಕಟಪೂರ್ವ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಅವರು ಮಾನವ ಕಳ್ಳ ಸಾಗಾಣಿಕೆ ಕುರಿತು ಸವಿಸ್ಥಾರವಾದ ಮಾಹಿತಿಯನ್ನು ನೀಡಿದರು.


ಈ ಕಾರ್ಯಾಗಾರದಲ್ಲಿ ಮನಿಶಾ ಸಾಳೆ, ಕಾರ್ಯದರ್ಶಿಗಳು, ಸಮೃದ್ಧಿ ಚಾರಿಟೇಬಲ್ ಟ್ರಸ್ಟ್, ಬೀದರ ಅವರು ಉಪಸ್ಥಿತರಿದ್ದರು, ನಿರೂಪಣೆಯನ್ನು ಗೌರಿಶಂಕರ ಪರತಾಪೂರೆ, ರಕ್ಷಣಾಧಿಕಾರಿಗಳು (ಅಸಾಪೋ) ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೀದರ ಅವರು ನಿರ್ವಹಿಸಿದರು. ಹಾಗೂ ಎಮ್.ಎಸ್ ಶಿರೋಮಣಿ ಅಧ್ಯಕ್ಷರು, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಬೀದರ ಅವರು ವಂದನಾರ್ಪಣೆಯನ್ನು ಮಾಡಿದರು.

prajaprabhat

Share
Published by
prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

6 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago