ಬೀದರ, ನವೆಂಬರ್.25 :-ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗಳು ಹಾಗೂ ಅಂಗಾAಗಳ ಮಾರಾಟ ಇಂತಹ ಕೆಲಸಗಳು ನಡೆಯುತ್ತಿವೆ. ಜಿಲ್ಲಾ, ತಾಲ್ಲೂಕಾ ಮತ್ತು ಗ್ರಾಮ ಮಟ್ಟಗಳಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ಹಮ್ಮಿಕೊಂಡು ಇದರ ಬಗ್ಗೆ ಪರಾಮರ್ಶಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಈ ಕುರಿತು ಜನ ಜಾಗೃತಿಯನ್ನು ಮೂಡಿಸಬೇಕು ಇದರಲ್ಲಿ ಎಲ್ಲರ ಪಾತ್ರ ಹಿರಿದಾಗಿರುತ್ತದೆಂದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶಮಾ ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಡನಾಡಿ ಸೇವಾ ಸಂಸ್ಥೆ ಮೈಸೂರು, ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಬೀದರ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಬೀದರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸಂಸ್ಕೃತಿಕ ಭವನ ಸಭಾಂಗಣ, ಕರ್ನಾಟಕ ಸಾಹಿತ್ಯ ಸಂಘ, ಬೀದರನಲ್ಲಿ ಹಮ್ಮಿಕೊಂಡಿದ್ದ “ಮಾನವ ಕಳ್ಳ ಸಾಗಾಣಿಕೆ ತಡೆ” ಕುರಿತು ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳಿಗೆ ಒಂದು ದಿನದ ಕಾರ್ಯಾಗಾರವವನ್ನು ಉದ್ಘಾಟಿಸಿ ಮಾತನಾಡಿದರು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಎ. ಬನಸೋಡೆ ಬೀದರ ಅವರು ಮಾತನಾಡಿ, ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಹಕ್ಕನ್ನು ಕೊಟ್ಟಿರುತ್ತದೆ. ಆದರೆ ಮಹಿಳೆಯರ ಮತ್ತು ಮಕ್ಕಳ ಬದುಕುವ ಹಕ್ಕನ್ನು ನಾವು ಕಸಿದುಕೊಂಡಿದ್ದೇವೆ. ಆದ್ದರಿಂದ ಮಹಿಳೆಯರು ಉನ್ನತ ಶಿಕ್ಷಣವನ್ನು ಪಡೆದುಕೊಂಡು ಎಲ್ಲಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುತ್ತಿದ್ದಾರೆ. ಮಾನವ ಕಳ್ಳ ಸಾಗಾಣಿಕೆಗೆ ತುತ್ತಾಗುತ್ತಿರುವವರು ಮಹಿಳೆಯರು ಮತ್ತು ಮಕ್ಕಳೇ ಜಾಸ್ತಿಯಾಗಿದ್ದಾರೆ. ಹಾಗಾಗಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ನಾವು ಶಿಕ್ಷಣವಂತರನ್ನಾಗಿ ಮಾಡಬೇಕು ಹಾಗೂ ಅವರಿಗೆ ಕಾನೂನಿನ ಬಗ್ಗೆ ಅರಿವನ್ನು ನೀಡಬೇಕು ಅಂದಾಗ ಮಾತ್ರ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿಗಳಾದ ಸ್ಟಾö್ಯನಿ ಕೆ.ವಿ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಅನಿಷ್ಠ ಪದ್ಧತಿಯಾಗಿದೆ. ನಮ್ಮ ದೇಶವು ಮುಂದುವರೆದ ರಾಷ್ಟçವಾದರೂ ಕೂಡ ಇನ್ನೂ ಮಾನವ ಕಳ್ಳ ಸಾಗಾಣಿಕೆ ಕುರಿತು ಮಾತನಾಡುವುದು ದುರಂತರ ಸಂಗತಿಯಾಗಿದೆ. ಈ ಒಂದು ಕರಾಳ ಮುಖದಡಿಯಲ್ಲಿ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸುವುದು, ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವುದು ಹಾಗೂ ದೇಹದ ಅಂಗಗಳನ್ನು ತೆಗೆಯುವುದು ಮಾರಾಟ ಮಾಡುವುದು ಹೀಗೆ ಇದರ ಹಿಂದೆ ಹಲವಾರು ಚಟುವಟಿಕೆಗಳು ಅಹಿತಕರವಾಗಿ ನಡೆಯುತ್ತಿದೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸುತ್ತಿದೆ. ಇದು ಒಂದು ದಿನದ ಪ್ರಕ್ರಿಯೆಯಲ್ಲ ಮಾನವ ಕಳ್ಳ ಸಾಗಾಣಿಕೆ ನಿರಂತರ ಪ್ರಕ್ರಿಯೆಯಾಗಿದೆ. ಇದನ್ನು ನಿವಾರಿಸಲು ಎಲ್ಲಾ ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯವರು ಸೇರಿ ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಬೇಕು. ಆದ್ದರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಡನಾಡಿ ಸೇವಾ ಸಂಸ್ಥೆ ಮೈಸೂರು ಹಾಗೂ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದು ಗ್ರಾಮ ಮಟ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಗಳಿಗೆ ಬಲವರ್ಧನೆ ಮಾಡಿ, ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸಿ, ಈ ಮಾನವ ಕಳ್ಳ ಸಾಗಾಣಿಕೆಯನ್ನು ಹೋಗಲಾಡಿಸಬೇಕೆಂದು ನುಡಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಅನಿಷ್ಠ ಪದ್ಧತಿಯಾಗಿದೆ. ಇದನ್ನು ತಡೆಗಟ್ಟಲು ನಾವು ಪ್ರತಿ ತಿಂಗಳು ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಸಭೆಗಳನ್ನು ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದವರೆಗೆ ಆಯೋಜಿಸಲಾಗುತ್ತದೆ. ಇದರಲ್ಲಿ ಪೊಲೀಸ ಇಲಾಖೆ ಹಾಗೂ ಎಲ್ಲಾ ಸಹಭಾಗೀದಾರ ಇಲಾಖೆಗಳ ಪಾತ್ರ ಮುಖ್ಯವಾಗಿರುತ್ತದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ನಮ್ಮ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಈ ಕುರಿತು ಮಾಹಿತಿಯನ್ನು ಪೊಲೀಸ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೀಡಬೇಕು. ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯ ಜಾಲವನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ಮತ್ತು ದಂಡವನ್ನು ವಿಧಿಸಬೇಕು ಇದಕ್ಕೆ ಎಲ್ಲಾ ಸಹಭಾಗೀದಾರ ಇಲಾಖೆಯವರು ಸಹಕರಿಸಬೇಕೆಂದು ತಿಳಿಸಿದರು.
ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪರಶುರಾಮ ಎಂ.ಎಲ್ ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ, ಮೈಸೂರು ಹಾಗೂ ನಿಕಟಪೂರ್ವ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಅವರು ಮಾನವ ಕಳ್ಳ ಸಾಗಾಣಿಕೆ ಕುರಿತು ಸವಿಸ್ಥಾರವಾದ ಮಾಹಿತಿಯನ್ನು ನೀಡಿದರು.
ಈ ಕಾರ್ಯಾಗಾರದಲ್ಲಿ ಮನಿಶಾ ಸಾಳೆ, ಕಾರ್ಯದರ್ಶಿಗಳು, ಸಮೃದ್ಧಿ ಚಾರಿಟೇಬಲ್ ಟ್ರಸ್ಟ್, ಬೀದರ ಅವರು ಉಪಸ್ಥಿತರಿದ್ದರು, ನಿರೂಪಣೆಯನ್ನು ಗೌರಿಶಂಕರ ಪರತಾಪೂರೆ, ರಕ್ಷಣಾಧಿಕಾರಿಗಳು (ಅಸಾಪೋ) ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೀದರ ಅವರು ನಿರ್ವಹಿಸಿದರು. ಹಾಗೂ ಎಮ್.ಎಸ್ ಶಿರೋಮಣಿ ಅಧ್ಯಕ್ಷರು, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಬೀದರ ಅವರು ವಂದನಾರ್ಪಣೆಯನ್ನು ಮಾಡಿದರು.
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…