ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ-ನ್ಯಾ.ಪ್ರಕಾಶ ಬನಸೋಡೆ


22.ಡಿ ಇಂದುಸಮಾಜದಲ್ಲಿ ಕೌಟುಂಬಿಕ ದೌರ್ಜನ್ಯ ಕಾಯಿದೆ, 2005 ರಿಂದ ಮಹಿಳೆಯರ ರಕ್ಷಣ. ಸಮಾಜದಲ್ಲಿ ಮಹಿಳೆಯರು ದೇವತೆಗೆ ಸಮಾನ, ಮಹಿಳೆಯರನ್ನು ನಾವು ಗೌರವಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ 15 ರಿಂದ 20 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಇಂದಿನ ದಿನಮಾನಗಳಲ್ಲಿ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ವಿವಾಹ ವಿಚ್ಛೇದನಗಳು ಜಾಸ್ತಿಯಾಗುತ್ತಿವೆ..

        ಮದುವೆಯ ಪಾವಿತ್ರ‍್ಯತೆಯ ಬಗ್ಗೆ ಅವರಿಗೆ ತಿಳುವಳಿಕೆ ಇಲ್ಲ. ಅದರಂತೆ ಮದುವೆಯ ಪವಿತ್ರ ಬಂಧನದ ಬರಿತು ತಿಳಿ ಹೇಳಬೇಕು. ಈ ಕಾಯ್ದೆಯ ಶಿಕ್ಷೆ ಹಾಗೂ ದಂಡದ ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಿ, ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು.


         ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಸಹಭಾಗೀದಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಕೌಟಿಂಬಿಕೆ ಹಿಂಸೆಯಿoದ ಮಹಿಳೆಯರ ಸಂರಕ್ಷಣೆ ಕಾಯ್ದೆ”ಯ ಅನುಷ್ಠಾನದಲ್ಲಿ ಸಹಭಾಗೀದಾರ ಇಲಾಖೆಯ ಪಾತ್ರದ ಕುರಿತಂತೆ ಭಾಗೀದಾರ ಇಲಾಖೆಯ ಅಧಿಕಾರಿಗಳಿಗಾಗಿ ಬೀದರ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಮೈಲೂರದಲ್ಲಿ ಹಮ್ಮಿಕೊಂಡಿದ್ದ ಓರಿಯಂಟೇಷನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್. ಅವರು ಮಾತನಾಡಿ, ಇಂದಿನ ದಿನಗಳಲ್ಲಿ ನೈತಿಕ ಶಿಕ್ಷಣ ಮತ್ತು ಸಂಸ್ಕಾರ ಪತನ ಹೊಂದಿರುವುದರಿAದ ಶೇಕಡ 70% ಪ್ರತಿಶತ ಕೌಟುಂಬಿಕ ದೌರ್ಜನ್ಯಗಳು ಮಹಿಳೆಯರ ಮೇಲೆ ನಡೆಯುತ್ತಿವೆ. ಆದ್ದರಿಂದ ದಂಪತಿಗಳಿಗೆ ಆಪ್ತ ಸಮಾಲೋಚನೆ ಆಗಬೇಕು. ನಮ್ಮ ನಮ್ಮ ಮನೆಗಳಲ್ಲಿ ಮಹಿಳೆಯರವನ್ನು ನಾವು ಗೌರವಿಸಬೇಕು. ಸ್ತ್ರೀಯರಿಗೆ ಆಸ್ತಿ ಹಕ್ಕು ಕೊಡಬೇಕು.

ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು ಮತ್ತು ಸ್ವಾವಲಂಬಿಯಾಗಬೇಕು. ಅಂದಾಗ ಮಾತ್ರ ಕೌಟುಂಬಿಕ ದೌರ್ಜನ್ಯಗಳು ಕಡಿಮೆಯಾಗುತ್ತ ಎಂದು ತಿಳಿಸಿದರು.


ಸಂಪನ್ಮೂಲ ವ್ಯಕ್ತಿಗಳಾಗಿ ಶಾರದಾ ಕಲ್ಕಲಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬೀದರ ಅವರು ಕೌಟುಂಬಿಕ ಹಿಂಸೆಯಿoದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಸ್ವರೂಪ, ಕಾಯ್ದೆಯ ಅನುಷ್ಠಾನಕ್ಕಾಗಿ ಸರ್ಕಾರದಿಂದ ಕೈಗೊಂಡಿರುವ ಕಾರ್ಯಕ್ರಮಗಳು, ಅನಿಲಕುಮಾರ ಕರಂಜಿ, ನ್ಯಾಯವಾದಿಗಳು ಬೀದರ ಅವರು ಲಿಂಗ ತಾರತಮ್ಯ ಹಾಗೂ ಮಹಿಳೆಯರ ಮೇಲೆ ಅದರ ಪರಿಣಾಮಗಳು, ಸಮಾಲೋಚನೆ-ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರಿಗೆ ಸಮಾಲೋಚನೆ ನೀಡುವ .

ವಿಧಿ-ವಿಧಾನಗಳು, ಹಣಮಂತರಾವ್ ಸಿಂಧೋಲ್ ಹಿರಿಯ ನ್ಯಾಯವಾದಿಗಳು, ಬೀದರ ಅವರು ನ್ಯಾಯಾಲಯದ ಆದೇಶಗಳ ಅನುಷ್ಠಾನ ಹಾಗೂ ದಂಡಾಧಿಕಾರಿಗಳೊAದಿಗೆ ಸಮನ್ವಯ ಮತ್ತು ಕಾಯ್ದೆಯ ಅನುಷ್ಠಾನದಲ್ಲಿ ಸಂರಕ್ಷಣಾಧಿಕಾರಿಗಳ ಪಾತ್ರ ಮತ್ತು ಕೌಟುಂಬಿಕ ಘಟನಾ ವರದಿ ತಯಾರಿಸುವ ಬಗ್ಗೆ ಮತ್ತು ಬಸವರಾಜ ಬುಳ್ಳಾ, ನ್ಯಾಯಾವಾದಿಗಳು, ಕಾಯ್ದೆಯಡಿ ಕಾನೂನು ಹಾಗೂ ಕಾರ್ಯವಿಧಾನದ ವಿಷಯಗಳು-ಕಾನೂನಿನಡಿ ಮಹಿಳೆಯರಿಗೆ ಲಭ್ಯವಿರುವ ಪರಿಹಾರಗಳು ಮತ್ತು ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಮಾಹಿತಿ, ರೂಪಾ ಎಸ್.

ಕೋಟೆಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಬೀದರ ಅವರು ಕಾಯ್ದೆ ಅನುಷ್ಠಾನದಲ್ಲಿ ಇಲಾಖೆಗಳ ಸಮನ್ವಯ, ಕಾಯ್ದೆಯಡಿ ಕಾರ್ಯನಿರತ ರಕ್ಷಣಾ ಗೃಹಗಳು ಮತ್ತು ಸೇವಾದಾತ ಸಂಸ್ಥೆಗಳ ಪಾತ್ರ ಮತ್ತು ಶ್ರೀ ಶಿವರುದ್ರ ಕಾಂಬಳೆ ವಕೀಲರು, ಬೀದರ ಅವರು ಭಾರತ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಪರಿಚಯ, ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಶಿವರಾಜ ಬಿರಾದಾರ, ಮಹಾಂತಪ್ಪ ಹಾಗೂ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ ಭಾಗವಹಿಸಿದ್ದರು.


ಈ ತರಬೇತಿಯ ನಿರೂಪಣೆಯನ್ನು ಶ್ರೀ ಗೌರಿಶಂಕರ ಪರತಾಪೂರೆ, ರಕ್ಷಣಾಧಿಕಾರಿಗಳು (ಅಸಾಪೋ) ಜಿಲ್ಲಾ ಮಕ್ಕ ರಕ್ಷಣಾ ಘಟಕ, ಬೀದರ ಅವರು ನಿರ್ವಹಿಸಿದರು. ಹಾಗೂ ಶ್ರೀ. ಗುರುರಾಜ ಜಿಲ್ಲಾ ನಿರೂಪಣಾಧಿಕಾರಿಗಳು, ಮಹಿಳಾ ಮ ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರು ಸ್ವಾಗತ ಕೋರಿದರು.

ಸಮಾಜದಲ್ಲಿ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಸವಿಸ್ತಾರವಾದ ಮಹಿತಿ ಸ್ಪಷ್ಟವಾಗಿ ಹೇಳಿದರು.

Source: www.prajaprabhat.com

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago