ಬೀದರ.03.ಫೆ.25:- ಬೀದರ್ ಜಿಲ್ಲೆಯಲ್ಲಿ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮಬಳಿ ರಸ್ಟಮೇಲೆ ಭಯಂಕರ ಘಟನೆ ರಸ್ತೆ ಮೇಲೇ ಮಹಿಳೆಯನ್ನು ಉಳಿಸಲು ಹೋದ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ಗಾಂಜಾದ ಕಟ್ಟುಗಳು ಚೆಲ್ಲಾಪಿಲ್ಲಿಯಾಗಿ ರೋಡಿನಲ್ಲಿ ಬಿದ್ದ ಘಟನೆ ಬಸವಕಲ್ಯಾಣ ತಾಲ್ಲೂಕಿನ ರಾಜೇಶ್ವರ ಗ್ರಾಮದ ಬಳಿ ನಡೆದಿದೆ.
ಇಂದು ಸುಮಾರು 11 ಗಂಟೆಗೆ ಹೈದರಾಬಾದ್ ಕಡೆಯಿಂದ ಮುಂಬೈ ಕಡೆಗೆ ಕಾರೊಂದು ಸಾಗುತ್ತಿತ್ತು.ಮಾರ್ಗಮಧ್ಯ ರಾಜೇಶ್ವರ ಗ್ರಾಮದ ಬಳಿ ರಸ್ತೆ ದಾಟುವ ಮಹಿಳೆಯೊಬ್ಬರಿಗೆ ಕಾರು ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾದ ಕಟ್ಟುಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ನಡೆದ ನಂತರ ಕಾರಿನಲ್ಲಿ ಇದ್ದ ಮಹಾರಾಷ್ಟ್ರ ಮೂಲದ ಇಬ್ಬರನ್ನು ಹಿಡಿದ ಸ್ಥಳೀಯರು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…