ಬೀದರ.15.ಜುಲೈ.25:- ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರತೆಯು ತಾಯ್ತನಕ್ಕೆ ಸರಿಯಾದ ವಯಸ್ಸು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಂಗ್ರೆ ತಿಳಿಸಿದರು.
ಅವರು ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿದ್ದುದರಿಂದ ಜನಸಂಖ್ಯೆಯು ಕೂಡ ಸೀಮಿತವಾಗಿರಬೇಕಾಗುತ್ತದೆ. ಜನಸಂಖ್ಯಾ ಸ್ಪೋಟವನ್ನು ತಡೆಗಟ್ಟಬೇಕಾದರೆ ಪ್ರಕೃತಿಯ ಸಂಪನ್ಮೂಲಗಳನ್ನು ಹೆಚ್ಚಿಸಲು ಸಾಧ್ಯಾವಿಲ್ಲ, ಜನಸಂಖ್ಯೆ ನಿಯಂತ್ರಿಸುವುದೊAದೆ ಏಕ ಮಾತ್ರ ಮಾರ್ಗವಾಗಿರುತ್ತದೆ ಹಾಗೂ ಜನರು ಎಚ್ಚೆತ್ತುಕೊಂಡು ಕುಟುಂಬ ಕಲ್ಯಾಣ ವಿಧಾನಗಳನ್ನು ಉಪಯೋಗಿಸಿ ಕುಟುಂಬದ ಸ್ಥಿüರತೆಯನ್ನು ಕಾಪಾಡಲು ಕರೆ ನೀಡಿದರು.
ಮಹಿಳೆಯರಿಗೆ ಕುಟುಂಬ ಕಲ್ಯಾಣ ಶಸ್ತç ಚಿಕಿತ್ಸಾ ಶಿಬಿರಗಳನ್ನು ಎಲ್ಲಾ ತಾಲೂಕಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೀದರ ಇಲ್ಲಿ ಆಯೋಜಿಸಲಾಗಿದೆ ಹಾಗೂ ತಾತ್ಕಾಲಿಕ ವಿಧಾನಗಳಾದ ಐ.ಯು.ಸಿ.ಡಿ, ಪಿ.ಪಿ.ಐ.ಯು.ಸಿ.ಡಿ, ಅಂತರಾ ಚುಚ್ಚುಮದ್ದು ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಉಚಿತವಾಗಿ ಲಭ್ಯವಿದ್ದು ಆಶಾ ಕಾರ್ಯಕರ್ತೆಯರು ಛಾಯಾ ಮಾತ್ರೆ, ಕಾಂಡೋಮ್ಸ್, ಮಾಲಾ-ಎನ್ ಮಾತ್ರೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲವರೆಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಹಾಗೂ ನೂತನ ತಾತ್ಕಾಲಿಕ ಗರ್ಭ ನಿರೋಧಕ ಸಬ್ ಡರ್ಮಲ್ ಸಿಂಗಲ್ ರಾಡ್ ಇಂಪ್ಲಾoಟ್ ಸೇವೆಗಳು ಬ್ರೀಮ್ಸ್ ಬೋಧಕ ಆಸ್ಪತ್ರೆ ಬೀದರ, 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೀದರ ಮತ್ತು ಬಸವಕಲ್ಯಾಣ ಹಾಗೂ ತಾಲೂಕಾ ಸಾರ್ವಜನಿಕ ಆಸ್ಪತ್ರೆ ಔರಾದನಲ್ಲಿ ಲಭ್ಯವಿದೆ. ಜನನ ಮತ್ತು ಮರಣ ಕಡ್ಡಾಯವಾಗಿ 21 ದಿನದ ಒಳಗೆ ನೊಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಧ್ಯಾನೇಶ್ವರ ನಿರಗುಡೆ ಹಾಗೂ ಎಲ್ಲಾ ಕಾರ್ಯಕ್ರಮಾನುಷ್ಠಾನ ಅಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ರಿಬ್ಬನ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬ್ರೀಮ್ಸ್ ಬೋಧಕ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಅಹೆಮದುದ್ದಿನ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಶಿವಶಂಕರ ಬಿ., ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಅನೀಲ ಚಿಂತಾಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಿರಣ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಶಂಕ್ರೆಪ್ಪಾ ಬೊಮ್ಮ, ನಗರ ಪ್ರಾಥಮಿಕ ಆರೋಗ್ಯ ಕೇಮದ್ರದ ಪೊಲೀಸ್ ಹೆಲ್ತ ಸೆಂಟರನ ಆಡಳಿತಾಧಿಕಾರಿ ಡಾ.ದೇವಕಿ ಖಂಡ್ರೆ, ಜಿಲ್ಲಾ ಸಾಂಕಿಕ ಅಧಿಕಾರಿ ಸುವರ್ಣಾ, ಎಫ್.ಪಿ.ಎ.ಶಾಖೆಯ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸಂಗಾರೆಡ್ಡಿ, ಡಾ.ಲಕ್ಷಿö್ಮಕಾಂತ ವಲ್ಲೇಪೂರೆ, ಮಹೇಶ್‌ರೆಡ್ಡಿ, ರಾಬರ್ಟ, ರೂಸ್ವೆಲ್ಟ್, ವೆಂಟಕರಮಣ, ಬಿಲಾಲ್, ಸೋಹೇಲ್, ಅನುರಾಧಾ, ತುಳಸಾಬಾಯಿ, ಶಾಲೂಬಾಯಿ, ಶಿವಾನಂದ ಹಿರೆಮಠ ಸೇರಿದಂತೆ ಕಿರಿಯ ಆರೋಗ್ಯ ಸಹಾಯಕಿ (ಮ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…