ಕೊಪ್ಪಳ.20.ಜೂನ.25:-ಕೊಪ್ಪಳ ನಗರದ ಜಿಲ್ಲಾಸ್ಪತ್ರೆಗೆ 2025ರ ಜನವರಿ 16 ರ ಸಂಜೆ ಬಿ ತುಳಸಿ ಗಂಡ ಬಿ ರಾಜು ಎಂಬ 50 ರಿಂದ 55 ವರ್ಷದ ಮಹಿಳೆಯನ್ನು ಯಾರೋ ಚಿಕಿತ್ಸೆಗಾಗಿ ದಾಖಲಿಸಿ ಹೋಗಿದ್ದು, ಮಹಿಳೆಯು ಚಿಕಿತ್ಸೆ ಫಲಕಾರಿಯಾಗದೆ 2025ರ ಜನವರಿ 17 ರ ಬೆಳಗಿನ ಜಾವ ಮೃತಪಟ್ಟಿರುತ್ತಾರೆ. ಮಹಿಳೆಯ ವಾರಸುದಾರರು ಪತ್ತೆಯಾಗದ ಕಾರಣ ಮಹಿಳೆಯ ಶವವನ್ನು ಜಿಲ್ಲಾಸ್ಪತ್ರೆಯ ಶಿಥಿಲಾಗಾರದಲ್ಲಿ ಇರಿಸಲಾಗಿದೆ. ಈ ಕುರಿತು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 01/2025 ಕಲಂ 194 ಬಿಎನ್‌ಎಸ್‌ಎಸ್ ಅಡಿ ಪ್ರಕರಣ ದಾಖಲಾಗಿದೆ.
ಮೃತ ಮಹಿಳೆಯ ಚಹರೆ:
ಮಹಿಳೆಯು ದುಂಡುಮುಖ, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತ ಕೂದಲು ಹೊಂದಿದ್ದು, ನೀಲಿ ಬಣ್ಣದ ಡಿಸೈನ್ ಇರುವ ನೈಟಿ ಧರಿಸಿರುತ್ತಾರೆ. ಇತರೆ ಬೇರೆ ಯಾವುದೇ ಗುರುತುಗಳು ಕಂಡು ಬಂದಿರುವುದಿಲ್ಲ.
ಮೇಲ್ಕಂಡ ಚಹರೆಯ ಮಹಿಳೆಯ ಬಗ್ಗೆ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಲ್ಲಿ, ಮೃತಳ ಗುರುತು, ವಿಳಾಸ ಪತ್ತೆಯಾದಲ್ಲಿ ನಗರ ಠಾಣೆ ಪಿಐ: 9480803745, 08539-220333, ನಗರ ಠಾಣೆ ಪಿಎಸ್‌ಐ: 9611589433, ಕೊಪ್ಪಳ ಕಂಟ್ರೋಲ್ ರೂಂ.08539-230100, 230222, ಸಂಪರ್ಕಿಸಿ ಮಾಹಿತಿ ನೀಡುವಂತೆ ಕೊಪ್ಪಳ ನಗರ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…