ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. (National cadet corps) ನಿರ್ದೇಶನಾಲಯವು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು, ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾಜಿ ಸೈನಿಕರನ್ನು ಎನ್‍ಸಿಸಿ ಬೆಟಾಲಿಯನ್‍ಗಳಿಗೆ ಹೆಚ್ಚುವರಿ ಸಿಬ್ಬಂದಿಗಳಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಭೂ ಸೇನೆಯಿಂದ ಆಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ (ಸುಬೇದಾರ್ ಮತ್ತು ನಾಯಬ್ ಸುಬೇದರ್) ಹಾಗೂ ಹವಾಲ್ದಾರ್ ರ್ಯಾಂಕ್‍ನ (ಎಮ್‍ಎಸಿಪಿ ಹವಾಲ್ದಾರ್‍ಗಳನ್ನು ಪರಿಗಣಿಸುವುದಿಲ್ಲ) ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸೈನ್ಯದಲ್ಲಿ ದುರ್ನಡತೆ ಮತ್ತು ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಆಸಕ್ತ ಮಾಜಿ ಸೈನಿಕರು 13 ಮಾರ್ಚ್ 2025 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಮೇಲ್ : itdirpc.kardte@nccindia.nic.in
ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು https://nis.bisag-n.gov.in/nis/downloads-public ಜಾಲತಾಣವನ್ನು ಬಳಸಬೇಕು. ನಿರ್ದೇಶನಾಲಯ
(ಕರ್ನಾಟಕ ಮತ್ತು ಗೋವಾ) ಕೆಎಸ್‍ಸಿಎಮ್‍ಎಫ್ ಬಿಲ್ಡಿಂಗ್, 4ನೇ ಮಹಡಿ ನಂ-8 ಕನ್ನಿಂಗ್‍ಹ್ಯಾಮ್ ರಸ್ತೆ, ಬೆಂಗಳೂರು-560001 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…