ಬೀದರ.08.ಫೆ.25:- ರಮಾಬಾಯಿ ಇಲ್ಲದೇ ಇದ್ದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಯಾವತ್ತೂ ಕೂಡ ತನ್ನ ಬದುಕಿನಲ್ಲಿ ಬೆಳಕು ಕಾಣುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ.
ರಮಾಬಾಯಿ ಅವರ ತ್ಯಾಗದಿಂದಲೇ ಅಂಬೇಡ್ಕರ್ ಅವರಿಗೆ ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಯಿತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಡಾ.ಜ್ಞಾನಪ್ರಕಾಶ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಸಾಯಂಕಾಲ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ವತಿಯಿಂದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.
ಹುಟ್ಟಿದ ನಾಲ್ಕು ಮಕ್ಕಳ ಸಾವು, ನೋವು ತಾವೆ ಅನುಭವಿಸಿ ಈ ನೆಲಕ್ಕೆ ಅಂಟಿದ ಅಸಮಾನತೆ ನಿರ್ಮೂಲನೆ ಮಾಡಲು, ಸಮೃದ್ಧ ಸಮಾಜ ನಿರ್ಮಾಣಕ ಮಾಡುವುದಕ್ಕೆ ಶಕ್ತಿಯಾದರು. ಮಹಿಳೆಯರ ಸ್ವಾಭಿಮಾನದ ಶಕ್ತಿ, ಪುರುಷರ ಆದರ್ಶ ತಾಯಿಯೇ ರಮಾಬಾಯಿ ಅಂಬೇಡ್ಕರ್ ಆಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೀರಶೇಟ್ಟಿ ದೀನೆ ಬರೆದಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನೆಯುವ ಆ ದಿನಗಳು ಎಂಬ ಕೃತಿ ಬಿಡುಗಡೆ ಮಾಡಲಾಯಿತು. 86 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭೀಕ್ಕುಣಿ ಅರ್ದಸ್ಮಿತಾ, ಕವಿತಾ ಹುಗ್ಗಿ ಪಾಟೀಲ್, ಗೋವಿಂದ್ ಪೂಜಾರಿ, ಲಕ್ಷ್ಮಿ ಬಸಪ್ಪ, ಮಹಾದೇವಿ ದಾಂಡೇಕರ್, ಅಂಬಾದಾಸ್ ಗಾಯಕವಾಡ್, ಸುಬ್ಬಣ್ಣ ಕರಕನಳ್ಳಿ ಹಾಗೂ ಸಂಘಪ್ರಿಯಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಇಂದು ಬೀದರ್ ನಗರದಲ್ಲಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರು ಕಡು ಬಡತನದಲ್ಲಿ ಸಂಸಾರದ ನೌಕೆಯನ್ನು ನಡೆಸಿ, ಅಂಬೇಡ್ಕರ್ ಅವರಿಗೆ ಆಧುನಿಕ ಭಾರತ ನಿರ್ಮಾಣದ ಶಿಲ್ಪಿಯಾಗುವಂತೆ ಮಾಡಿದರು.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…