ಚಾಮರಾಜನಗರ .25.ಜುಲೈ.25:- ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಸರಕಾರಿ ಪ್ರೌಢಶಾಲೆಗೆ ಯಳಂದೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಕಾಶ್ ರವರು ಭೇಟಿ ನೀಡಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರ ನಿಯಮಗಳ ಹಾಗೂ ಸೈಬರ್ ಸಹಾಯವಾಣಿ 1930, 112 ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ವಿದ್ಯಾರ್ಥಿಗಳು ಈ ದೇಶದ ಆಸ್ತಿ ಇವರ ಸಂರಕ್ಷಣೆ ನಮ್ಮೇಲ್ಲರ ಜವಾಬ್ದಾರಿಯಾಗಿದೆ.
ಈ ದೇಶದ ಯುವ ಶಕ್ತಿಗಳು ಉತ್ತಮ ಮಾರ್ಗದಲ್ಲಿ ನಡೆದರೆ ಈ ದೇಶ ಪ್ರಬುದ್ಧ ಭಾರತವಾಗುತ್ತದೆ. ಆದರೆ ಇಂದು ಯುವಕರು, ಬಾಲಕಿಯರು ಮಾದಕ ವ್ಯಸನಕ್ಕೆ ತುತ್ತಾಗಿದ್ದಾರೆ ಇದರಿಂದ ಅವರ ಜೀವನ ಸರ್ವನಾಶವಾಗುತ್ತದೆ ಇದರಿಂದ ಹೊರ ಬರಬೇಕಾದರೆ ಅರಿವು ಅಗತ್ಯವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಕೂಡ ಬಾಲ್ಯ ವಿವಾಹ ನಡೆಯುತ್ತದೆ ಇದು ಕಾನೂನಿಗೆ ವಿರೋಧವಾಗಿದೆ ಇದರ ಬಗ್ಗೆ ಮಾಹಿತಿಗಳಿದ್ದರೆ ತಿಳಿಸಿ. ಬಾಲ್ಯ ವಿವಾಹದಿಂದ ಬಾಲೆಯರ ಜೀವನ ನಾಶವಾಗುತ್ತದೆ. ಬಾಲ್ಯ ವಿವಾಹ ಮಾಡಿದರೆ ಮದುವೆ ಗಂಡು, ಪೋಷಕರು, ಕಲ್ಯಾಣ ಮಂಟಪಗಳ ಮೇಲೆ ಪ್ರಕರಣಗಳು ದಾಖಲಾಗುತ್ತದೆ.
ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಮೋಟರ್ ವಾಹನಗಳು ಬಳಸಬಾರದು.
18 ವರ್ಷ ದಾಟಿದರೆ ಮಾತ್ರ ವಾಹನಗಳನ್ನು ಚಲಾಯಿಸಬೇಕು ಹಾಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಏಕೆಂದರೆ ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಯುವಕರು ಅಪಘಾತದಲ್ಲಿ ಸಾವನಪ್ಪಿದ್ದಾರೆ.
ಕಡಿಮೆಯಾಗಬೇಕಾದರೆ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದರು.
ಹಾಗೂ ಇನ್ನೂ ಅನೇಕ ವಿಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾಗಣ್ಣ, ಶಿಕ್ಷಕರಾದ ಶಿವಕುಮಾರ್, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…