ಪ್ರಜಾ ಪ್ರಭಾತ ಸುದ್ದಿ:
ಗದಗ.04.ಮಾರ್ಚ್.25:- ಗದಗ ನಗರದ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವಾರ್ತಾ ಇಲಾಖೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಚಲಿಗಾಲದಲ್ಲಿ ಉಸಿರಾಟದ ತೊಂದರೆ ಜಾಸ್ತಿಯಿರುತ್ತದೆ. ಆದರೆ, ಬೇಸಿಗೆಯಲ್ಲಿ ಹೀಟ್ ವೇವ್, ಹೀಟ್ ಸ್ಟ್ರೋಕ್ ಹೆಚ್ಚಾಗಿ ಕಂಡು ಬರುತ್ತದೆ.
ನಮ್ಮ ದೇಹದಲ್ಲಿರುವ ಉಷ್ಣಾಂಶಕ್ಕಿಂತ ತಾಪಮಾನ ಏರಿಕೆ ಉಂಟಾದಾಗ ಹೆಚ್ಚು ಬೆವರುವುದು, ಸುಸ್ತು, ಬಾಯಾರುವುದು, ತಲೆ ಸುತ್ತುವುದು ಕಣ್ಣು ಮಂಜಾಗುವುದರ ಜೊತೆಗೆ ನಿರ್ಜಲೀಕರಣದಿಂದ ಮೂರ್ಛೆ ಬಂದು ಬೀಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಪ್ರಖರ ಬಿಸಿಲಿನಿಂದ ಆದಷ್ಟು ದೂರವಿರಬೇಕು ಎಂದು ಹೇಳಿದರು.
ಬೇಸಿಗೆಯ ಅವಧಿಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4ರ ವರೆಗೆ ಹೆಚ್ಚಿನ ತಾಪಮಾನವಿದ್ದು, ಗರ್ಭಿಣಿಯರು, ಮಕ್ಕಳು, ವೃದ್ಧರು ಹೆಚ್ಚಿಗೆ ಈ ಅವಧಿಯಲ್ಲಿ ಮನೆಯಿಂದ ಹೊರಗಡೆ ಬರುವುದನ್ನು ಆಷ್ಟು ಕಡಿಮೆ ಮಾಡಬೇಕು. ಸಡಿಲವಾದ ಕಾಟನ್ ಬಟ್ಟೆ, ಕೂಲಿಂಗ್ ಗ್ಲಾಸ್ ಧರಿಸಬೇಕು. ಜಾಸ್ತಿ ನೀರು ಕುಡಿಯಬೇಕು, ಡಿಹೈಡ್ರೇಶನ್ ಆಗದಂತೆ ಓಆರ್‌ಎಸ್ ದ್ರಾವಣ ಸೇವಿಸಬೇಕು.
ಎಳನೀರು ಹಾಗೂ ತಂಪಾದ ಜ್ಯೂಸ್ ಕುಡಿಯಬೇಕು. ಮಾಧ್ಯಮದಲ್ಲಿ ಬರುವ ತಾಪಮಾನದ ಎಚ್ಚರಿಕೆಯನ್ನು ಕೇಳಬೇಕು. ಇದರಿಂದ ಹೀಟ್ ಸ್ಟ್ರೋಕ್ ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಮಾತನಾಡಿ, 2024-25ನೇ ಸಾಲಿನ ಅಕ್ಟೋಬರ್ 4ರಿಂದ ನವೆಂಬರ್ 21ರ ವರೆಗೆ ಹಮ್ಮಿಕೊಂಡಿದ್ದ ಕುಷ್ಠರೋಗ ಅರಿವು ಆಂದೋಲನ ಅಭಿಯಾನದಲ್ಲಿ 1,70,906 ಮನೆಗಳಿಗೆ ಭೇಟಿ ನೀಡಿ 8,33,711 ಜನರನ್ನು ತಪಾಸಣೆ ಮಾಡಲಾಗಿದೆ. ಆ ಪೈಕಿ 16 ಪ್ರಕರಣಗಳು ಬೆಳಕಿಗೆ ಬಂದಿದ್ದು, ಚಿಕಿತ್ಸೆ ಆರಂಭಿಸಲಾಗಿದೆ.
2024ರ ಏಪ್ರಿಲ್‌ನಿಂದ 2025ರ ಜನೆವರಿವರೆಗೆ ಒಟ್ಟು 61 ಪ್ರಕರಣಗಳಿದ್ದು, 56 ಪ್ರಕರಣಗಳು ಗುಣಮುಖವಾಗಿವೆ ಎಂದರು.
ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಮಾತನಾಡಿ, ನಿಕ್ಷಯ ಪೋಷಣ ಅಭಿಯಾನದಡಿ ಜಿಲ್ಲೆಯಲ್ಲಿ ಕ್ಷಯರೊಗಿಗಳಿಗೆ ಮಾಸಿಕ 1000 ರೂ. ಸಹಾಯಧನ ನೀಡಲಾಗುತ್ತಿದೆ.
ದಾನಿಗಳಿಂದ ಪೌಷ್ಟಿಕಾಂಶ ಕಿಟ್ ವಿತರಿಸುವ ಗುರಿಯನ್ನು ಹೊಂದಲಾಗಿದೆ. ಅಲ್ಲದೇ, ಜಿಲ್ಲೆಯ 40 ಗ್ರಾಪಂಗಳನ್ನು ಆಯ್ಕೆ ಮಾಡಿಕೊಂಡು ಕ್ಷಯಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ನಿಗಾ ವಹಿಸಿದ್ದಾರೆ ಎಂದು ವಿವರಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ಆಧುನಿಕ ಜೀವನ ಶೈಲಿ ಪದ್ಧತಿಯಿಂದಾಗಿ ಜನಸಾಮಾನ್ಯರಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕಾಗಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತದಂತಹ ಸಮಸ್ಯೆಗಳು ಎದುರಾಗುವ ಮುನ್ನ ಕೆಲ ಮುನ್ಸೂಚನೆಗಳನ್ನು ನೀಡುತ್ತವೆ.
ಆ ಮುನ್ಸೂಚನೆಗಳನ್ನು ಎಚ್ಚರಿಕೆ ವಹಿಸಿಕೊಂಡು ತಪಾಸಣೆಗೊಳಗಾಗುವ ಮೂಲಕ ಮುಂಜಾಗೃತವಾಗಿ ಚಿಕಿತ್ಸೆ ಪಡೆದುಕೊಂಡು ಮುಂದೆ ಎದುರಾಗುವ ಕಷ್ಟದಿಂದ ಪಾರಾಗಬೇಕು. ಇಲ್ಲವಾದಲ್ಲಿ ಪ್ರಾಣಾಪಾಯ ಸಂಭವಿಸುವ ಸಂಕಷ್ಟಗಳು ಎದುರಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದೆಲ್ಲೆಡೆ ಹಕ್ಕಿಜ್ವರ ಉಲ್ಬಣಗೊಂಡಿದ್ದು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ.
ಹಕ್ಕಿಜ್ವರ ಹೇಗೆ ಹರಡುತ್ತದೆ, ಇದರಿಂದ ಉಂಟಾಗುವ ಪರಿಣಾಮಗಳೇನು, ಜಿಲ್ಲೆಯಲ್ಲಿ ಹಕ್ಕಿಜ್ವರ ಯಾವ ಪ್ರಮಾಣದಲ್ಲಿದೆ ಎಂಬುದರ ಕುರಿತು ಆರೋಗ್ಯ ಇಲಾಖೆಯು ಮಾಧ್ಯಮದ ಮೂಲಕ ಜನಸಾಮಾನ್ಯರಿಗೆ ಎಚ್ಚರಿಕೆ ಜೊತೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಮಾತನಾಡಿ, ಮಾಧ್ಯಮವು ಆರೋಗ್ಯ ಇಲಾಖೆಯ ಹಾಗೂ ಜನಸಾಮಾನ್ಯರ ಕೊಂಡಿಯಾಗಿ ಕೆಲಸ ಮಾಡುತ್ತಿದೆ.
ಮಾಧ್ಯಮದವರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಹಮ್ಮಿಕೊಂಡಿರುವ ಕಾರ್ಯಾಗಾರವು ಉಪಯುಕ್ತವಾಗಿದ್ದು, ಇದರಿಂದ ಆರೋಗ್ಯ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…