ರಾಯಚೂರ.31.ಜುಲೈ25:- (ಕ.ವಾ.): ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರ್ಕಲ್ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಕೆರೆಗೆ ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ ಕಾಂದೂ ಅವರು ಜುಲೈ 30ರಂದು ಭೇಟಿ ನೀಡಿ ಪರಿಶೀಲಿಸಿದು.
ಗೋರ್ಕಲ್ ಗ್ರಾಮದ 8 ಎಕರೆ 13 ಗುಂಟೆನಲ್ಲಿ ಕೆರೆ ನಿರ್ಮಾಣ ಮಾಡಲಾಗಿದೆ. 34 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವ 8 ಹಳ್ಳಿಗಳಿಗೆ ಈ ಕೆರೆಯ ನೀರು ತಲುಪುತ್ತವೆ. 33,900 ಜನರು ಈ ಕುಡಿಯುವ ನೀರಿನ ಕೆರೆಯ ಮೇಲೆ ಅವಲಂಬಿತರಾಗಿದ್ದಾರೆ. ಕೆರೆ ನೀರು ಕುಡಿಯಲು ಯೋಗ್ಯವಾಗಿದೆಯೋ ಇಲ್ಲವೋ ಎನ್ನುವುದರ ಬಗ್ಗೆ ಪರಿಶೀಲಿಸಲು ನೀರು ಪರೀಕ್ಷೆ ಮಾಡಿಸಿ ವರದಿ ಪಡೆಯಬೇಕು. ಪ್ರತಿ ಹದಿನೈದು ದಿನಗಳಿಗೊಮ್ಮೆ ನೀರನ್ನು ಪರೀಕ್ಷೆಗೊಳಪಡಿಸಿ ಗ್ರಾಮಸ್ಥರಿಗೆ ಸರಬರಾಜು ಮಾಡಬೇಕೆಂದು ಇದೆ ವೇಳೆ ಸಿಇಓ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಪಗಲ್ ಗ್ರಾಮದ ಜಲ ಜೀವನ್ ಮೀಷನ್ ಯೋಜನೆಯಡಿ ನಿರ್ಮಾಣ ಮಾಡಲಾದ ಕುಡಿಯುವ ನೀರಿನ ನಳ ಪರಿಶೀಲನೆ ಮಾಡಿದ ಸಿಇಓ ಅವರು, ಸಿಸಿ ರಸ್ತೆ ಪಕ್ಕದಲ್ಲಿ ತೆಗೆದ ಗುಂಡಿಯನ್ನು ಮುಚ್ಚಲು ಸೂಚನೆ ನೀಡಿದರು.
ಬಾಕಿಯಿರುವ ಕಾಮಗಾರಿ ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬಳಿಕ ಸಿಇಓ ಅವರು ನೀರಮಾನ್ವಿ ಗ್ರಾಮಕ್ಕೆ ತೆರಳಿ ಅಲ್ಲಿನ ಪಂಚಾಯತಿ ವ್ಯಾಪ್ತಿಯ ಕೋಳಿ ಕ್ಯಾಂಪಿನಲ್ಲಿರುವ ಜಲಧಾರೆ ಯೋಜನೆಯಡಿ ನಿರ್ಮಾಣ ಮಾಡಿದ ನೀರಿನ ಟ್ಯಾಂಕನ್ನು ಪರಿಶೀಲಿಸಿದರು. ಕುಡಿಯುವ ನೀರಿನ ಟ್ಯಾಂಕಿನಿಂದ ಎಷ್ಟು ಜನರಿಗೆ ಉಪಯೋಗವಾಗುತ್ತದೆ ಮತ್ತು ಎಷ್ಟು ಟ್ಯಾಂಕುಗಳನ್ನು ಜಲಧಾರೆ ಯೋಜನೆಯಡಿ ನಿರ್ಮಾಣ ಮಾಡಿದ್ದಾರೆ ಎಂಬುದರ ಬಗ್ಗೆ ಇದೆ ವೇಳೆ ಸಿಇಓ ಅವರು ಮಾಹಿತಿ ಪಡೆದುಕೊಂಡರು. ಎಲ್ಲಾ ಕಡೆಗೆ ಗುಣಮಟ್ಟದ ಟ್ಯಾಂಕಗಳನ್ನು ನಿರ್ಮಾಣ ಮಾಡುವಂತೆ ಇದೆ ವೇಳೆ ಸಿಇಓ ಅವರು ನಿರ್ದೇಶನ ನೀಡಿದರು.
ಬಳಿಕ ಸಿಇಓ ಅವರು ಕೋಳಿ ಕ್ಯಾಂಪಗೆ ತೆರಳಿ ಅಲ್ಲಿನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ದಾಖಲಾತಿ, ಸ್ಟಾಕ್ ರಿಜಿಸ್ಟರ್ , ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಪಡೆದರು. ಮಕ್ಕಳ ದಾಖಲಾತಿಯಲ್ಲಿನ ನ್ಯೂನತೆ ಕಂಡು ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಸೂಚಿಸಿದರು.
ಬಳಿಕ ನೀರಮಾನ್ವಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ನಲ್ಲಭಾಯಿ ಕ್ಯಾಂಪಿನ ಜೆಜೆಎಂ ಕಾಮಗಾರಿ ವೀಕ್ಷಣೆ ಮಾಡಿ, ನಳದಲ್ಲಿ ನೀರು ಬರುವುದರ ಬಗ್ಗೆ ಖಾತ್ರಿ ಪಡಿಸಿಕೊಂಡರು.
ಈ ವೇಳೆ ಮಾನ್ವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಖಾಲಿದ್ ಅಹಮದ್, ಕಾರ್ಯಪಾಲಕ ಅಭಿಯಂತರ ನಾಗೇಶ್ ಮಟಮಾರಿ, ಗ್ರಾ.ಕು.ನಿ. ವಿಭಾಗದ ಕಾರ್ಯಪಾಲಕ ಅಭಿಯಂತರ ಸತೀಶ್ ಕುಮಾರ್, ಪಂ.ರಾ. ಸಹಾಯಕ ನಿರ್ದೇಶಕರಾದ ದೀಪಾ, ಜಲಧಾರೆ ಯೋಜನೆಯ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…