ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ

ಬೆಂಗಳೂರು.05.ಮಾರ್ಚ್.25:-ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ, ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸುವಂತೆ ಪಂಚಾಯತ್ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದೇನೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ.

ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ರೂಪಿಸಬೇಕು ಎನ್ನುವುದು ನನ್ನ ಉದ್ದೇಶ.

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡುತ್ತೇನೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

2 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

3 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

4 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

12 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

12 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

13 hours ago