ಬೀದರ.14.ಮಾರ್ಚ.25: – ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ
ಔರಾದ (ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಮಾರ್ಚ.15 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‌ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ)/ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ ಬೀದರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಗಳ ವಿವರ: ಮಾರ್ಚ.15 ರಂದು ಬೆಳಿಗ್ಗೆ 11 ಗಂಟೆಗೆ ಔರಾದ್ (ಬಿ), ವಿಭಾಗ ಕಚೇರಿಯಲ್ಲಿ, ಬೀದರ (ನಗರ) ಉಪ ವಿಭಾಗ ಕಚೇರಿಯಲ್ಲಿ, ಬೀದರ (ಗ್ರಾಮೀಣ) ಉಪ ವಿಭಾಗ ಕಛೇರಿಯಲ್ಲಿ, ಮಧ್ಯಾಹ್ನ 3 ಗಂಟೆಗೆ ಭಾಲ್ಕಿ ಉಪ ವಿಭಾಗ ಕಛೇರಿಯಲ್ಲಿ ಹಾಗೂ ಕಮಠಾಣ ಉಪ ವಿಭಾಗ ಕಛೇರಿಯಲ್ಲಿ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಹಾಗೂ ಗುವಿಸಕಂನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದು ಕೊರತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.