ಮಾರ್ಚ.1 ರಿಂದ 3ರವರೆಗೆ ಬೀದರನಲ್ಲಿರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ


ಬೀದರ.26.ಜನವರಿ.25:- ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನವನ್ನು ಬೀದರನಲ್ಲಿ ಮಾರ್ಚ.1 ರಿಂದ 3 ದಿನಗಳ ಕಾಲ ನಡೆಸಲಾಗುವುದೆಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.


ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನೂರಾರು ವರ್ಷಗಳಿಂದ ರೂಢಿಗತವಾಗಿ ಔಷಧೀಯ ಸಸ್ಯಗಳನ್ನು ವಿವಿಧ ರೋಗಗಳನ್ನು ಗುಣಪಡಿಸುವಲ್ಲಿ ತೊಡಗಿಸಿಕೊಂಡಿರುವ ಪಾರಂಪರಿಕ ವೈದ್ಯರಿಗೆ ತಾಂತ್ರಿಕ ಜ್ಞಾನ ಹಾಗೂ ಸರಕಾರದ ಮನ್ನಣೆ ದೊರೆಯಬೇಕಿದೆ.

ಈ ನಿಟ್ಟಿನಲ್ಲಿ ಸಮ್ಮೇಳನಗಳು ಪರಿಣಾಮಕಾರಿಯಾಗುತ್ತವೆ. ಬಿದರನಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಲು ಎಲ್ಲ ರೀತಿಯ ಸಹಾಯ ಸಹಕಾರ ನೀಡಲಾಗುವುದೆಂದರು.


ಆಧುನಿಕ ಕಾಲದಲ್ಲಿ ಎಲ್ಲೆಡೆ ಮಾಲಿನ್ಯ ಕಾಣುತ್ತಿದ್ದೇವೆ. ಉತ್ತಮ ಆರೋಗ್ಯಕ್ಕೆ ಪಾರಂಪರಿಕ ಔಷಧಿಗಳು ಬಹುಪಯೋಗಿಗಳಾಗಿವೆ. ರಾಜ್ಯದಲ್ಲಿ ಹೇರಳವಾದ ಔಷಧೀಯ ಸಸ್ಯಗಳಿವೆ. ಪಶ್ಚಿಮ ಘಟ್ಟವು ಇಡೀ ಜಗತ್ತಿನ 18 ಜೀವ ವೈವಿದ್ಯತೆ ಪ್ರದೇಶಗಳಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ಸಾವಿರಾರು ಔಷಧೀಯ ಸಸ್ಯಗಳನ್ನು ಹೊಂದಿದೆ. ಈ ನಿಟ್ಟಿನಲ್ಲಿ ಇನ್ನು ಅನೇಕ ಸಂಶೋಧನೆಗಳು ಜರುಗತ್ತಿವೆ.

ಬೀದರನಲ್ಲಿಯೂ ವಿವಿಧ ಔಷಧೀಯ ಸಸ್ಯಗಳಿವೆ. ರಾಜ್ಯದಲ್ಲಿ ಸಾವಿರಾರು ಪಾರಂಪರಿಕ ಔಷಧೀಯ ವೈದ್ಯರು ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆಂದು ಸಚಿವರು ತಿಳಿಸಿದರು.


ಜೀವ ವೈವಿದ್ಯತೆ ಮಂಡಳಿಯ ಆಯುಕ್ತರು ಆಗಿರುವ ಸಚಿವರು ಮಂಡಳಿಯಿಂದ 12 ಲಕ್ಷಗಳ ಅನುದಾನವನ್ನು ಹಾಗೂ ಇತರೇ ಮೂಲಗಳಿಂದ ಒಟ್ಟು 25 ಲಕ್ಷ ಒದಗಿಸಲಾಗುವುದು. ಸಮ್ಮೇಳನಕ್ಕೆ ಸುಮಾರು 2 ಸಾವಿರ ವೈದ್ಯರು ಆಗಮಿಸುವ ನಿರೀಕ್ಷೆಯಿದ್ದು ವಿವಿಧ ಗೋಷ್ಠಿಗಳು ಜರುಗಲಿವೆಯೆಂದು ಸಚಿವರು ತಿಳಿಸಿದರು.


ಪಾರಂಪರಿಕ ವೈದ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಅನುಗನಾಡು ಕೃಷ್ಣಮೂರ್ತಿ ಮಾತನಾಡಿ, ಸಮ್ಮೇಳನದಲ್ಲಿ ಅನುಭವಿ ವೈದ್ಯರಿಗೆ ವೈದ್ಯ ರತ್ನ ಪ್ರಶಸ್ತಿ ನೀಡುವುದು. ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಗೋಷ್ಠಿಗಳು ಜರುಗಲಿವೆ. ಈ ಬಾರಿ ಇಬ್ಬರಿಗೆ ಔಷಧಿ ಸಸ್ಯಗಳ ಸಂರಕ್ಷಿಸಿರುವ ಪಾರಂಪರಿಕ ವೈದ್ಯರಿಗೆ ವನೌಷಧಿ ಪಂಡಿತ ಪ್ರಶಸ್ತಿ ನೀಡಲಾಗುವುದೆಂದರು. ಸಮ್ಮೇಳನದಲ್ಲಿ ವಿವಿಧ ಮಳಿಗೆಗಳನ್ನು ಹಾಕಲಾಗುವುದೆಂದರು. 


ಆರಂಭದಲ್ಲಿ ಪ್ರೊ.ಜಗನ್ನಾಥ ಹೆಬ್ಬಾಳೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ರಾಜ್ಯ ಪಾರಂಪರೀಕ ವೈದ್ಯ ಪರಿಷತ್ ಅಧ್ಯಕ್ಷ ಮಹಾದೇವಯ್ಯ ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಎಂ.ಡಿ.ಗೌಸ್. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುತ್ತಣ್ಣ ಕರಿಗಾರ, ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಎ.ಬಿ.ಪಾಟೀಲ, ಪ್ರೊ.ಉಮಾಕಾಂತ ಪಾಟೀಲ, ಪ್ರೊ.ರಾಜೇಂದ್ರ ಬಿರಾದಾರ, ಡಾ.ರಾಜಕುಮಾರ ಹೆಬ್ಬಾಳೆ, ಬಸವರಾಜ ಕಟ್ಟಿಮನಿ, ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ, ವೈಜನ್ನಾಥ ಪಾಟೀಲ, ಶಿವಾನಂದ ಜಂಗಿನಮಠ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

4 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

4 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

4 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

4 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

4 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

5 hours ago