ಬೀದರ.01.ಮಾ.25:- ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೀದರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಮಾರ್ಚ.2 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬಿದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೀದರ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರುಗಳು ಭಾಗವಹಿಸಲಿದ್ದಾರೆ.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…