ರಾಜ್ಯದ ವಿವಿಧೆಡೆಯಿಂದ 2000 ವೈದ್ಯರು ಭಾಗಿ;
ಪಾರಂಪರಿಕ ಜ್ಞಾನ ಸಂರಕ್ಷಣೆಗೆ ಕ್ರಮ-ಈಶ್ವರ ಖಂಡ್ರೆ
ಬೀದರ.28.ಫೆಬ್ರುವರಿ.25:- ಮಾರ್ಚ.2, 3 ಹಾಗೂ 4 ರಂದು ಬೀದರನಲ್ಲಿ ಸರಕಾರದ ಆಶ್ರಯದಲ್ಲಿ ಬೃಹತ್ ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನವು ಜರುಗಲಿದ್ದು, ರಾಜ್ಯದ ವಿವಿಧಡೆಯಿಂದ ಸುಮಾರು 2 ಸಾವಿರ ವೈದ್ಯರು ಭಾಗವಹಿಸಲಿದ್ದಾರೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.
ಪತ್ರಕರ್ತರ ಭವನದಲ್ಲಿಂದು ಈ ಕುರಿತು ಆಯೋಜಿಸಲಾದ ಪತ್ರಿಕಾಗೋಷ್ಠಿನ್ನು ಉದ್ದೇಶಿಸಿ ಅವರು ಮಾತನಾಡುತ್ತಾ, ಪ್ರಥಮ ಬಾರಿಗೆ ಸರಕಾರದ ಆಶ್ರಯದಡಿ ಬೀದರನಲ್ಲಿ ಬೃಹತ್ ಪ್ರಮಾಣದಲ್ಲಿ ಈ ವೈದ್ಯರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಮಠಗಳ ಆಶ್ರಯದಲ್ಲಿ ನಡೆಸಲಾಗುತ್ತಿತ್ತು. ಕರ್ನಾಟಕ ಜೀವ ವೈವಿದ್ಯ ಮಂಡಳಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವೈದ್ಯ ಪರಿಷತ್ತಿನ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಈ 15ನೇ ವೈದ್ಯ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದರು.
ಶತಮಾನಗಳಿಂದ ಪಾರಂಪರಿಕವಾಗಿ ಹರಿದು ಬಂದ ಈ ವೈದ್ಯಕೀಯ ಜ್ಞಾನವನ್ನು ಉಳಿಸಿ ಬೆಳೆಸಬೇಕಾಗಿದೆ. ಆಯಾ ಪ್ರದೇಶಕ್ಕಾನುಗುಣವಾಗಿ ಸಸ್ಯ ಪ್ರಭೇದಗಳಿವೆ. ರಾಜ್ಯದ ಜೀವ ವೈವಿದ್ಯತೆ ಶ್ರೀಮಂತವಾಗಿವೆ. ಇದನ್ನು ಸಂರಕ್ಷಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪಾರಂಪರಿಕ ವೈದ್ಯ ಪದ್ಧತಿಯಿಂದ ಅನೇಕ ರೋಗಗಳನ್ನು ವಾಸಿ ಮಾಡಲಾಗುತ್ತದೆ.
ಕಾಲಗರ್ಭದಲ್ಲಿ ವಂಶಪಾರಂಪರೆಯಾಗಿ ಹರಿದು ಬರುತ್ತಿರುವ ಪಾರಂಪರಿಕ ವೈದ್ಯಕೀಯ ಜ್ಞಾನವು ಅಲ್ಲಲ್ಲಿ ಬತ್ತಿ ಹೋಗದಂತೆ ಕ್ರಮ ವಹಿಸಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.
ಪ್ರತಿಯೊಂದು ಸಸ್ಯವು ಒಂದಿಲ್ಲೊಂದು ಔಷಧಿಯ ಗುಣವನ್ನು ಹೊಂದಿರುತ್ತದೆ. ರೋಗವಿಲ್ಲದ ಮನುಷ್ಯನಿಲ್ಲ, ಔಷಧಿ ಗುಣವಿಲ್ಲದ ಸಸ್ಯವಿಲ್ಲ ಎಂಬ ಗಾದೆ ಮಾತು ಪ್ರಸ್ತುತವೆನಿಸುತ್ತದೆ. ಆದ್ದರಿಂದ ಪಾರಂಪರಿಕ ವೈದ್ಯ ಶಾಸ್ತ್ರವನ್ನು ರಕ್ಷಣೆ ಮಾಡುವುದು ಮಹತ್ವದಾಗಿದೆ.
ಸಮ್ಮೇಳನದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸುವ ತಜ್ಞರು, ಸಂಶೋಧಕರಿಂದ ಒಟ್ಟು 11 ಗೋಷ್ಠಿಗಳು ಜರುಗಲಿವೆ. ಸಮ್ಮೇಳನದ ಯಶಸ್ವಿಗಾಗಿ ಒಟ್ಟು 17 ಸಮಿತಿಗಳನ್ನು ರಚಿಸಲಾಗಿದೆ. ಉತ್ತಮ ಆಹಾರ ಹಾಗೂ ವಸತಿಯ ವ್ಯವಸ್ಥೆ ಮಾಡಲಾಗಿದೆ. ಮಾರ್ಚ.1 ರಂದು ಬೆಳಿಗ್ಗೆ 9 ಗಂಟೆಗೆ ಎಸ್.ಕೆ.ಜಾಬಶೆಟ್ಟಿ ಆರ್ಯುವೇದಿಕ ಕಾನೂನು ಸಿದ್ಧಾರೂಢ ಮಠದಿಂದ ರಂಗ ಮಂದಿರದವರೆಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆಯೆಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷ ಎಂ.ಡಿ.ಗೌಸ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ.ಪಾಟೀಲ, ಪ್ರೊ.ಜಗನ್ನಾಥ ಹೆಬ್ಬಾಳೆ, ಪಾರಂಪರಿಕ ವೈದ್ಯ ಪರಿಷತ್ ಅಧ್ಯಕ್ಷ ಜಿ.ಮಹಾದೇವಯ್ಯ ಹಾಗೂ ಕಾರ್ಯದರ್ಶಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…