ಕೊಪ್ಪಳ.18.ಜೂನ್.25:-ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವ ಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ.
ಫಲಾನುಭವಿಗಳು ಕೊಪ್ಪಳ ಜಿಲ್ಲೆಯ ಬಸದಿಗಳು, ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬoಧಪಟ್ಟ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000/- ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ.5000/- ಮಾಸಿಕ ಗೌರವ ಧನ ನೀಡಲಾಗುವುದು.
ಸಂಬAಧಪಟ್ಟ ಆರ್ಚಕರುಗಳು ಅರ್ಜಿಯೊಂದಿಗೆ ಅರ್ಚಕರು/ಗ್ರಂಥಿಗಳ ಭಾವಚಿತ್ರ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ ಪ್ರತಿ, ಅರ್ಚಕರು/ಗ್ರಂಥಿಗಳು ಅವರ ಹುದ್ದೆಗೆ ಸಂಬoಧಪಟ್ಟ ಧಾರ್ಮಿಕ ವಿದ್ಯಾರ್ಹತೆಯ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ, ಸಂಸ್ಥೆಯವರು ಅರ್ಚಕರುಗಳ ಮಾಹೆವಾರು ಕರ್ತವ್ಯದ ಹಾಜರಾತಿ ಬಗ್ಗೆ ನೀಡಿದ ಸೇವಾ ಪ್ರಮಾಣ ಪತ್ರ ಧೃಡೀಕರಣ ಪತ್ರವನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…