Home » ಲೈವ್ ನ್ಯೂಸ್ » ಮಾಸಿಕ ವ್ಯಾಸಂಗ ವೇತನ/ಫೇಲೋಶಿಪ್‍ಗಾಗಿ ಅರ್ಜಿ ಆಹ್ವಾನ

ಮಾಸಿಕ ವ್ಯಾಸಂಗ ವೇತನ/ಫೇಲೋಶಿಪ್‍ಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.25.ಡಿಸೆಂಬರ್.25:- 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-02-2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೇಲೋಶಿಪ್‍ಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ.ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2026 ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://www.bcwd.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಅಥವಾ ದೂರವಾಣಿ ಸಂಖ್ಯೆ: 8050770004 (ಕಛೇರಿಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10.00 ರಿಂದ ಸಂಜೆ 05.30ರ ವರೆಗೆ) ಹಾಗೂ ಜಿಲ್ಲಾ ಕಛೇರಿ ಬೀದರ ದೂರವಾಣಿ ಸಂಖ್ಯೆ 08482-233148 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology