ಬೆಂಗಳೂರು: ಕರ್ನಾಟಕದ ಬಸ್ ಮೇಲೆ ನಿರಂತರ ಶೋಷಣೆಯಾಗಿತ್ತಿರುವುದರಿಂದ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರಿಗೆ, ಸಾರಿಗೆ ಬಸ್, ಹಾಗೂ ಬಸ್ ನ ಚಾಲಕ, ನಿರ್ವಾಹಕರಿಗೆ ನಿರಂತರ ಹಲ್ಲೆ ಮಾಡುತ್ತಿರುವುದರಿಂದ ಇದನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಕನ್ನಡಪರ ಸಂಘಟನೆಗಳು ಇಂದು ರಾಜಧಾನಿ ಬೆಂಗಳೂರಿನಲ್ಲಿ ಸಭೆ ಸೇರಿದ್ದು, ‘ಅಖಂಡ ಕರ್ನಾಟಕ ಬಂದ್’ಗೆ ನಿರ್ಧರಿಸಿವೆ. ‘ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯ’ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಎಲ್ಲ ಕನ್ನಡಪರ ನಾಯಕರು, ಕಾರ್ಯಕರ್ತರು ಅಖಂಡ ಕರ್ನಾಟಕ ಬಂದ್‌ಗೆ ಮಾಡಲು ಮುಂದಾಗಿದ್ದಾರೆ.
ಸರ್ವ ನಾಯಕರ ಅಭಿಪ್ರಾಯ, ಸಲಹೆ ಸೂಚನೆ ಪಡೆದು ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ಇಂದಿನ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆಯುತ್ತಿದ್ದಾರೆ. ಮರಾಠಿಗರ ಅಟ್ಟಹಾಸ ವಿರೋಧಿ ಹಾಗೂ ಕನ್ನಡಿಗರ ಪರವಾಗಿ, ಕರ್ನಾಟಕದ ಪರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲು ಬೆಂಗಳೂರಿನಲ್ಲಿ ಶುಕ್ರವಾರ (ಫೆಬ್ರವರಿ 28) ಸಭೆ ನಡೆಯಿತು. ಒಕ್ಕೋಟದ ಅಧ್ಯಕ್ಷ ಮತ್ತು ಕನ್ನಡ ಪರ ಮುಂಚೂಣಿ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಸೇರಿದಂತೆ ವಿವಿಧ ಕನ್ನಡಪರ ನಾಯಕರು ಸಭೆಯಲ್ಲಿ ಚರ್ಚಿಸಿ ಅಖಂಡ ಕರ್ನಾಟಕ ಬಂದ್‌ಗೆ ನಿಧರಿಸಿದ್ದಾರೆ. ಅಧಿಕೃತ ಘೋಷಣೆ ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಗಾಗ ಕಾಲುಕೆರೆದು ಜಗಳಕ್ಕೆ ಬರುತ್ತಿರುವ, ಆಗಾಗ್ಗೆ ಕನ್ನಡಿಗರ ಮೇಲೆ ದೌರ್ಜನ್ಯ ಮಾಡುತ್ತಿರುವವರನ್ನು ಹತ್ತಿಕ್ಕಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರಲು ಕನ್ನಡಪರ ಸಂಘಟನೆಗಳು ಬಂದ್‌ಗೆ ಮುಂದಾಗಿದೆ ಎಂದು ತಿಳಿದು ಬಂದಿವೆ.
ಎಲ್ಲರನ್ನು ವಿಶ್ವಾಸಕ್ಕೆ ತೆರಗೆದುಕೊಂಡು ಬಂದ್ ಕರೆ
ವಾಟಾಳ್ ನಾಗರಾಜ್ ಅವರು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕರ್ನಾಟಕ ಬಂದ್ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈಗಾಗಲೇ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಬಣದವರೊಂದಿಗೆ ಮಾತನಾಡಿದ್ದೇವೆ. ಎಲ್ಲ ಕನ್ನಡಪರ ನಾಯಕರನ್ನು ಅಭಿಪ್ರಾಯ ಪಡೆದು ಬಂದ್ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.
ಕರ್ನಾಟಕ ಬಂದ್ ವಿಚಾರದಲ್ಲಿ ಈ ಹಿಂದೆ ಕೆಲವು ಸಂಘಟನೆಯವರು ಬೆಂಬಲಿಸಿದ್ದರು, ಮತ್ತೆ ಕೆಲವರು ಬೆಂಬಲಿಸಿರಲಿಲ್ಲ. ಹೀಗಾಗಿ ಈ ಬಾರಿ ಅಂತಹ ಪ್ರಸಂಗ ಆಗಲ್ಲ. ಎಲ್ಲರನ್ನು ವಿಶ್ವಾಸ ತೆಗೆದುಕೊಂಡು, ಸಲಹೆ ತೆಗೆದುಕೊಂಡು ಬಂದ್ ಮಾಡಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…