ಕೊಪ್ಪಳ.28.ಜೂನ್.25:-2025-26ನೇ ಸಾಲಿನ ಜಿಲ್ಲಾ ವಲಯದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ (ಪ.ಜಾತಿ ಮತ್ತು ಪ.ಪಂಗಡ ವರ್ಗದವರಿಗೆ ಮಾತ್ರ) ಹಾಗೂ ಮೀನು ಮಾರುಕಟ್ಟೆ ಮತ್ತು ಮತ್ಸö್ಯ ವಾಹಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ದ್ವಿಚಕ್ರವಾಹನ ಮತ್ತು ಐಸ್‌ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ಯಲಬುರ್ಗಾ ತಾಲೂಕಿಗೆ ಮಾತ್ರ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ವಿತರಿಸಲು ತಾಲೂಕಾವಾರು ಗುರಿ ನಿಗದಿಯಾಗಿರುತ್ತವೆ. ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಅರ್ಹ/ಆಸಕ್ತ ವೃತ್ತಿಪರ ಮೀನುಗಾರರು ಹಾಗೂ ಮೀನುಗಾರಿಕೆ ಸಹಕಾರ ಸಂಘಗಳು ಜುಲೈ 20 ರೊಳಗೆ ಕೊಪ್ಪಳ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…