ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉಪಸ್ಥಿತಿಯಲ್ಲಿ 124ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಜೂನ್ 27 ರಂದು ಅಪರಾಹ್ನ 3 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

2 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

4 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

10 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

13 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

14 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

14 hours ago