ಮುಂದಿನ 4 ದಿನ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ.

ಬೆಂಗಳೂರು.04.ಜೂನ್.25:- ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (Karnataka Rains) ಯೆಲ್ಲೋ ಅಲರ್ಟ್‌ ನೀಡಿದೆ. ಬುಧವಾರ (ಜೂನ್‌ 4)ರಂದು ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಸೇರಿ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಜೂನ್ 3 ಮತ್ತು 4ರಂದು ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರಲಿದೆ.

ಜೂನ್‌ 5ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನುಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಜೂನ್‌ 6ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಲಿದೆ.

ಜೂನ್‌ 7ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

2 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago