ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಜೆಡಿಎಸ್ ಮಹತ್ವದ ಸಭೆ; ಚುನಾವಣೆ ತಂತ್ರಗಾರಿಕೆ ಬಗ್ಗೆ ಚರ್ಚೆ

ಜಿಡಿಎಸ್‌ ಸೆಕ್ಯುಲರ್ ಇಂದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಜಿ.ಪಂ.,ತಾ.ಪಂ. ಚುನಾವಣೆ ತಂತ್ರಗಾರಿಕೆ ಬಗ್ಗೆ ಚರ್ಚೆ ಹಾಗೂ ವಿಧಾನ ಮಂಡಲ ಕಲಾಪದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಭಾನುವಾರ ಮಹತ್ವದ ಸಭೆ ನಡೆಯಿತು.

ಸದಸ್ಯತ್ವ ಅಭಿಯಾನಕ್ಕೆ ವೇಗ ನೀಡಬೇಕು. ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಎರಡನೇ ಹಂತದ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇದಕ್ಕೆ ಸ್ಪಂದಿಸಿದ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು. ಸಂಘಟನೆಯ ಬಗ್ಗೆ ಅಸಡ್ಡೆ ಬೇಡ ಎಂದು ಕಿವಿಮಾತು ಹೇಳಿದರು.

ನಾನು ಪ್ರತಿ ಜಿಲ್ಲೆ, ತಾಲ್ಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಕಷ್ಟಪಟ್ಟು ಪಕ್ಷ ಕಟ್ಟಿದ್ದೇನೆ. ಈಗಲೂ ಓಡಾಟ ಮಾಡುತ್ತಿದ್ದೇನೆ. ಪಕ್ಷ ಕಟ್ಟೋದು ಸುಲಭದ ಕೆಲಸವಲ್ಲ. ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ ಎಂದು ಮಾಜಿ ಪ್ರಧಾನಿ ದೇವೇಗೌಡರು ಮುಖಂಡರಿಗೆ ತಾಕೀತು ಮಾಡಿದರು.

ಯಾರೂ ಎದೆಗುಂದಬೇಕಿಲ್ಲ. ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡೋಣ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ. ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು. ಎಲ್ಲಿಗೆ ಬೇಕಾದರೂ ಕರೆಯಿರಿ, ಬರುತ್ತೇನೆ. ನಿಮ್ಮ ಜತೆಯಲ್ಲಿ ಹೋರಾಟ ಮಾಡುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಚುನಾವಣೆಗೆ ಮಾತ್ರ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ

ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ನಾಯಕನಾಗುವ ಕನಸು ಕಟ್ಟಿಕೊಂಡರೆ ಸಾಲದು. ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ. ನಿಮ್ಮ ಕ್ಷೇತ್ರ, ಮತಗಟ್ಟೆ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ. ಸದಸ್ಯತ್ವ ಅಭಿಯಾನವನ್ನು ವೇಗವಾಗಿ ನಡೆಸಬೇಕು. ಯುವಜನರು, ರೈತರು, ಕೃಷಿ ಕಾರ್ಮಿಕರು ಹೆಚ್ಚು ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆ ಆಗಬೇಕು ಎಂದು ಸಚಿವರು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಬಿ.ಎಂ.ಫಾರೂಕ್, ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ರಶ್ಮಿ ರಾಮೇಗೌಡ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಡಾ. ಕೆ.ಅನ್ನದಾನಿ, ಕೆ.ಎ. ತಿಪ್ಪೇಸ್ವಾಮಿ ಇತರರು ಪಾಲ್ಗೊಂಡಿದ್ದರು.

prajaprabhat

Recent Posts

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…

4 hours ago

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…

4 hours ago

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…

4 hours ago

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…

4 hours ago

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…

5 hours ago

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…

5 hours ago