ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅವರು ಆಗಸ್ಟ್ 8 ರಂದು ಶುಕ್ರವಾರ ರಾತ್ರಿ 11:50 ಕ್ಕೆ ಬೆಂಗಳೂರಿನಿಂದ ಹೊರಟು ಆಗಸ್ಟ್. 9 ರಂದು ಶನಿವಾರ ಬೆಳಿಗ್ಗೆ 7:50ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹುಬ್ಬಳ್ಳಿ ಪ್ರವಾಸಿ ಮಂದಿರಕ್ಕೆ ತೆರಳಿ ನಂತರ ಬೆಳಿಗ್ಗೆ 9:30 ಕ್ಕೆ ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಹೊರಟು ಅಣ್ಣಿಗೇರಿ. ಗದಗ. ಬೆಟಗೇರಿ ಮಾರ್ಗವಾಗಿ ಬೆಳಿಗ್ಗೆ 11 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಕೊಪ್ಪಳ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕೊಪ್ಪಳದಲ್ಲಿ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ 2025. ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದ ನಂತರ ಅಂದು ಸಂಜೆ 4 ಗಂಟೆಗೆ ಕೊಪ್ಪಳದಿಂದ ರಸ್ತೆಯ ಮೂಲಕ ಹೊಸಪೇಟೆ. ದಾವಣಗೆರೆ. ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…
ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…
ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ವಿಶೇಷ ಕಾನೂನು ನಿಯಮಾವಳಿ ರೂಪಿಸಿ ಯುಜಿಸಿ ಮತ್ತು…
ಹೊಸ ದೆಹಲಿ.08.ಆಗಸ್ಟ್.25:- ದೇಶದಲ್ಲಿ ರಸ್ತೆ ಮತ್ತು ಸಾರಿಗೆ ಮೂಲಸೌಕರ್ಯಗಳು ವಿಶ್ವ ದರ್ಜೆಯ ಮಟ್ಟಕ್ಕೆ ಏರುತ್ತಿವೆ, ಇದರಿಂದಾಗಿ ಪ್ರಯಾಣದ ಸಮಯ ಕಡಿಮೆಯಾಗುತ್ತದೆ…